ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರಿಗೆ ಸುವರ್ಣಾವಕಾಶ

0
  • ಸಿಲ್ಕ್ ಸಮಗ್ರ-2 ಯೋಜನೆಯಡಿ ಬಿತ್ತನೆ ಕೋಠಿ ಕಟ್ಟಡ ಹಾಗೂ ಸಲಕರಣೆಗೆ  ಸಹಾಯಧನ

ಬೆಂಗಳೂರು, ಸೆಪ್ಟೆಂಬರ್ 29: ರಾಜ್ಯದ ರೇಷ್ಮೆ ಕೃಷಿಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆಯು ‘ಕೇಂದ್ರ ವಲಯ ಸಿಲ್ಕ್ ಸಮಗ್ರ-2’ ಯೋಜನೆಯಡಿ ನೋಂದಾಯಿತ ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರಿಗೆ ಬಿತ್ತನೆ ಕೋಠಿ ಕಟ್ಟಡ ನಿರ್ಮಾಣ ಹಾಗೂ ಸಲಕರಣೆಗಳನ್ನು ಪಡೆದುಕೊಳ್ಳಲು ಧನಸಹಾಯ (ಸಹಾಯಧನ) ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಬಯಸುವ ಅರ್ಹ ನೋಂದಾಯಿತ ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ರೇಷ್ಮೆ ವಿಸ್ತರಣಾಧಿಕಾರಿಗಳ ಮೂಲಕ ಅರ್ಜಿಯನ್ನು 2026 ನೇ ಅಕ್ಟೋಬರ್ 23 ರ ಒಳಗಾಗಿ ಸಲ್ಲಿಸಬೇಕು.

ಅಗತ್ಯ ವಿವರಗಳು, ನಿಯಮಗಳು ಮತ್ತು ಅರ್ಜಿ ನಮೂನೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://sericulture.karnataka.gov.in ಗೆ ಭೇಟಿ ನೀಡಬಹುದು.  ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಜಿಲ್ಲೆಯ ರೇಷ್ಮೆ ಜಂಟಿ ನಿರ್ದೇಶಕರು ಅಥವಾ ರೇಷ್ಮೆ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

ಅರ್ಹ ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರು ಈ ಅವಕಾಶವನ್ನು ಬಳಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here