ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಗಣಕೀಕರಣ ನಿರ್ಧಾರ

0

ಭಾರತೀಯ ಗ್ರಾಮೀಣ ಅರ್ಥ ವ್ಯವಸ್ಥೆಯಲ್ಲಿ ತನ್ನದೇ ಆದ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಗಣಕೀಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ದೇಶದ ಎಲ್ಲ ಸಹಕಾರಿ ಸಂಘಗಳನ್ನು ಬಲಪಡಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ, ಕೇಂದ್ರ ಸಹಕಾರ ಸಚಿವಾಲಯ ಎಲ್ಲ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ರಿಜಿಸ್ಟ್ರಾರ್‌ಗಳನ್ನು ಮತ್ತು 13 ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,851 ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳನ್ನು (ARDBs) ಗಣಕೀಕರಣಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ದೇಶದ ಎಲ್ಲಾ ಪ್ರಾಥಮಿಕ ಕೃಷಿ ಸಾಲ ಸಂಘಗಳ (PACS) ಗಣಕೀಕರಣ ಯೋಜನೆಯ ಮಾದರಿಯಲ್ಲಿ, ರಾಷ್ಟ್ರೀಯ ಏಕೀಕೃತ ಸಾಫ್ಟ್‌ವೇರ್ ಮತ್ತು ಗಣಕೀಕರಣದ ಮೂಲಕ 13 ರಾಜ್ಯಗಳ 1,851 ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳ (ARDBs) ಗಣಕೀಕರಣಕ್ಕಾಗಿ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಅನುಮೋದಿಸಲಾಗಿದೆ. ಕೇಂದ್ರ ರಿಜಿಸ್ಟ್ರಾರ್‌ನಂತೆಯೇ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಸಹಕಾರಿಗಳ ರಿಜಿಸ್ಟ್ರಾರ್ ಕಚೇರಿಗಳು ಕಾರ್ಯ ನಿರ್ವಹಿಸುತ್ತವೆ

ಈ ಯೋಜನೆಗಾಗಿ ಕೇಂದ್ರೀಯ ಪ್ರಾಜೆಕ್ಟ್ ಮಾನಿಟರಿಂಗ್ ಯುನಿಟ್ (ಪಿಎಂಯು) ಸ್ಥಾಪಿಸಲಾಗುವುದು, ಇದು ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಕೆಲಸ ಮಾಡುತ್ತದೆ. ಈ ಯೋಜನೆಗೆ ಒಟ್ಟು ಅಂದಾಜು ವೆಚ್ಚ ರೂ. 225.09 ಕೋಟಿ.

ಈ ಯೋಜನೆಯ ಅನುಷ್ಠಾನವು ರಾಜ್ಯಗಳ ಸಹಕಾರಿ ಇಲಾಖೆಗಳು ಮತ್ತು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳ (ARDB) ಕಛೇರಿಗಳು ಒದಗಿಸುವ ಸೇವೆಗಳನ್ನು ತ್ವರಿತವಾಗಿ ಪಡೆಯಲು ಜನರಿಗೆ ಅನುಕೂಲ ಮಾಡಿಕೊಡುತ್ತದೆ,  ಈ ಕಚೇರಿಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಏಕರೂಪತೆಯನ್ನು ತರುತ್ತದೆ. ಅವುಗಳನ್ನು ಹೆಚ್ಚು ಪರಿಣಾಮಕಾರಿಯಾಗಿದ್ದು ಸಾರ್ವಜನಿಕರ  ಸಮಯ ಉಳಿಸುತ್ತದೆ ಎಂದು ಆಶಿಸಲಾಗಿದೆ.

LEAVE A REPLY

Please enter your comment!
Please enter your name here