ಬೆಂಗಳೂರು ಜೂನ್ 04: 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯ ಬೆಳೆ ಸ್ಪರ್ಧೆಗಾಗಿ ಭಾಗವಹಿಸಲಿಚ್ಚಿಸುವ ರೈತರ / ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ /ಜಿಲ್ಲಾ/ ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅನ್ವಯಿಸುವಂತೆ ನಿಗದಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು. ಪ್ರಸಕ್ತ 2022-23ನೇ ಸಾಲಿನಿಂದ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ರಾಜ್ಯ / ಜಿಲ್ಲಾ / ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ರೈತ / ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಆಗಸ್ಟ್ 31, 2022 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.