ಜಾಗೃತ ದಳ ಕಾರ್ಯಾಚರಣೆ; ಸಿಎಂ ಶ್ಲಾಘನೆ

ನಕಲಿ ಬೀಜ ದಾಸ್ತಾನುದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಹಂಗಾಮು ಬಿತ್ತನೆ ಚಟುವಟಿಕೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅದರಲ್ಲೂ ಅನುಮೋದಿತ ಬೀಜಗಳ ಮೇಲೆ ಅವಲಂಬಿತವಾಗಿರುವವರು , ನಕಲಿ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

0

ಬೆಂಗಳೂರು,ಏ.25:ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಭಾರಿ ಪ್ರಮಾಣದ ನಕಲಿ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಶ್ರಮ ಮತ್ತು ಕೃಷಿ ಜಾಗೃತ ದಳದ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ಲಾಘಿಸಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಸೂಚನೆಯ ಮೇರೆಗೆ ಏ.24 ರಂದು ಹಾವೇರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ಗೋಡೌನ್ ಗಳ ಮೇಲೆ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ಮೆಕ್ಕೇಜೋಳ ಬೀಜದ ದಾಸ್ತಾನುಗಳನ್ನು ವಶಪಡಿಸಿಕೊಂಡಿದ್ದಾರೆ.  ರಾಜ್ಯದಲ್ಲಿ ಚಾಲ್ತಿಯಲ್ಲಿರುವ ನಕಲಿ ಬೀಜ ಮಾರಾಟಗಾರರ ಜಾಲವನ್ನು ಪತ್ತೆ ಹಚ್ಚಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ಶೀಥಲೀಕರಣ ಘಟಕಗಳಿಂದ ಸುಮಾರು 7026 ಕ್ವಿಂಟಾಲ್ ಮತ್ತು ಧಾರವಾಡ ಜಿಲ್ಲೆಯಲ್ಲಿ 270.60 ಕ್ವಿಂಟಾಲ್, ಬಳ್ಳಾರಿ ಜಿಲ್ಲೆಯ ಹಡಗಲಿಯಲ್ಲಿ 70 ಕ್ವಿಂಟಾಲ್ ಒಟ್ಟು 7366 ಕ್ವಿಂಟಾಲ್ ಬೀಜಗಳ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೊತ್ತ ರೂ.10.00 ಕೋಟಿಗಳಾಗಿದೆ.
ರಾಜ್ಯದ ಸುಮಾರು 10-11 ಜಿಲ್ಲೆಗಳಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯುತ್ತಿರುವ ರೈತರು ದೃಢೀಕರಿಸಿದ ಬೀಜಗಳ ಮೇಲೆ ಅವಲಂಬಿತರಾಗಿದ್ದಾರೆ. ರೈತರು ದೃಢೀಕರಣಗೊಂಡ ಮತ್ತು ಅನುಮೋದಿತ ಬೀಜಗಳನ್ನು ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಬಿಡಿ ಬೀಜಗಳನ್ನು ಖರೀದಿ ಮಾಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಕಲಿ ಬೀಜ ದಾಸ್ತಾನುದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಹಂಗಾಮು ಬಿತ್ತನೆ ಚಟುವಟಿಕೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅದರಲ್ಲೂ ಅನುಮೋದಿತ ಬೀಜಗಳ ಮೇಲೆ ಅವಲಂಬಿತವಾಗಿರುವವರು , ನಕಲಿ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಸರ್ಕಾರ,  ನಕಲಿ ಬೀಜ – ಕೀಟ ನಿಯಂತ್ರಕ ಔಷಧಿಗಳ ಮಾರಾಟಗಾರರ ಮಾಫಿಯಾವನ್ನು ಹತ್ತಿಕ್ಕಲು ದೃಢ ನಿರ್ಧಾರ ತೆಗೆದುಕೊಂಡಿರುವುದಾಗಿಯೂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here