ಕಾಲಕ್ಕೆ ತಕ್ಕ ಕೃಷಿತಂತ್ರಜ್ಞಾನದ ಅಭಿವೃದ್ಧಿ ಅಗತ್ಯ

ಇಂದು ವಿಕಾಸಸೌಧದಲ್ಲಿ ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಮುಖ್ಯಸ್ಥರ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು. ಸಭೆಗಳು ಹಾಗೂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು, ಸೂಚನೆಗಳು ಬರೀ ಕಡತದಲ್ಲಿ ಕಿರುಪುಸ್ತಕದಲ್ಲಷ್ಟೇ ಉಳಿಯದೇ ಕಾರ್ಯರೂಪಕ್ಕೆ ಬರಬೇಕು. ಟಿಎ ಡಿಎ ಸಮಯ ವ್ಯರ್ಥಕ್ಕಾಗಿ ಸಭೆಗಳನ್ನು ಮಾಡದೇ ರೈತರಿಗೆ ಅನುಕೂಲ ಕಲ್ಪಿಸಲು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯತ್ತ ಹೊಸ ಕಲಿಕೆಗೆ ಅವಕಾಶ ಮಾಡಿಕೊಡುವಲ್ಲಿ ಉಪಯೋಗವಾಗಬೇಕು. ವಿಶ್ವವಿದ್ಯಾಲಯಗಳಲ್ಲಿ ಹೊಸತನ್ನು ಕಲಿಯಲು ಮತ್ತು ಕಲಿಸಲು ರೈತರಿಗೆ ಎಲ್ಲ ರೀತಿಯಲ್ಲಿ ಅನುಕೂಲ ಕಲ್ಪಿಸುವಂತಹ ಹೊಸಸಂಶೋಧನೆಗಳು ನಡೆಯಬೇಕು. ಹೊಸತಳಿಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರತಿಪಾದಿಸಿದರು.

0

ಬೆಂಗಳೂರು, ಮೇ.14: ಎಲ್ಲ ಕಾಲಘಟ್ಟದಲ್ಲಿಯೂ ಏಕರೂಪ ಬೆಳೆ ತಂತ್ರಜ್ಞಾನಗಳಿರುವುದಿಲ್ಲ. ಅವುಗಳು ಬದಲಾಗುತ್ತಿರುತ್ತವೆ. ಈ ನಿಟ್ಟಿನಲ್ಲಿ ಕೃಷಿಸ್ನೇಹಿ – ರೈತಸ್ನೇಹಿ ಆದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ ಸಮುದಾಯಕ್ಕೆ ನೀಡುವ ಹೊಣೆಗಾರಿಕೆ ಕೃಷಿ ವಿಶ್ವವಿದ್ಯಾಲಯಗಳ ಮೇಲಿದೆ. ಇದರ ಜೊತೆಗೆ ಕೃಷಿ ಇಲಾಖೆಗೂ ಮಾರ್ಗದರ್ಶಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟರು.
ಇಂದು ವಿಕಾಸಸೌಧದಲ್ಲಿ ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಮುಖ್ಯಸ್ಥರ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು. ಸಭೆಗಳು ಹಾಗೂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು, ಸೂಚನೆಗಳು ಬರೀ ಕಡತದಲ್ಲಿ ಕಿರುಪುಸ್ತಕದಲ್ಲಷ್ಟೇ ಉಳಿಯದೇ ಕಾರ್ಯರೂಪಕ್ಕೆ ಬರಬೇಕು. ಟಿಎ ಡಿಎ ಸಮಯ ವ್ಯರ್ಥಕ್ಕಾಗಿ ಸಭೆಗಳನ್ನು ಮಾಡದೇ ರೈತರಿಗೆ ಅನುಕೂಲ ಕಲ್ಪಿಸಲು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯತ್ತ ಹೊಸ ಕಲಿಕೆಗೆ ಅವಕಾಶ ಮಾಡಿಕೊಡುವಲ್ಲಿ ಉಪಯೋಗವಾಗಬೇಕು. ವಿಶ್ವವಿದ್ಯಾಲಯಗಳಲ್ಲಿ ಹೊಸತನ್ನು ಕಲಿಯಲು ಮತ್ತು ಕಲಿಸಲು ರೈತರಿಗೆ ಎಲ್ಲ ರೀತಿಯಲ್ಲಿ ಅನುಕೂಲ ಕಲ್ಪಿಸುವಂತಹ ಹೊಸಸಂಶೋಧನೆಗಳು ನಡೆಯಬೇಕು. ಹೊಸತಳಿಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರತಿಪಾದಿಸಿದರು.

“ಯಾವ ಕಾಯಿಲೆಗೆ ಯಾವ ಮದ್ದು” ಎನ್ನುವುದು ವೈದ್ಯರಿಗೆ ಹೇಗೆ ತಿಳಿದಿರುತ್ತದೆಯೋ ಅದೇ ರೀತಿ ರೈತರ ಬೆಳೆಯ ಸಮಸ್ಯೆ ಗಳಿಗೆ ಕೃಷಿವಿಶ್ವವಿದ್ಯಾಲಯಗಳು ಪರಿಹಾರ ಸೂಚಿಸಬೇಕು. ಪ್ರತಿಯೊಬ್ಬ ಪ್ರೊಫೇಸರ್ ಕೂಡ ಕೃಷಿಕ್ಷೆತ್ರಕ್ಕೆ ಹೋಗಿ ರೈತರ ಜೊತೆ ಸಂವಾದ ನಡೆಸುತ್ತಿರಬೇಕು.. ಹಿಂದಿನ ಕಾಲದ ಬೇಸಾಯದ ಪದ್ಧತಿಗೂ ಈಗಿನ ಪದ್ಧತಿಗೂ ಬಹಳಷ್ಟು ವ್ಯತ್ಯಾಸಗಳಿವೆ. ಕಾಲಕ್ಕೆ ತಕ್ಕ ಕೃಷಿ ತಂತ್ರಜ್ಞಾನದ ಬಳಕೆ ಬಗ್ಗೆ ಸಂಶೋಧನೆ ನಡೆಯಬೇಕು. ರೈತರಿಗೆ ನೇರವಾಗಿ ಮಾಹಿತಿ ಹೋಗುವಂತೆ ನೋಡಿಕೊಳ್ಳಬೇಕು. ಎಂದು ಹೇಳಿದರು.

ವಿಶ್ವವಿದ್ಯಾಲಯಗಳಲ್ಲಿ ಹೊಸಹೊಸ ತಳಿಗಳ ಸಂಶೋಧನೆ ಬಗ್ಗೆ ಹೆಚ್ಚು ಗಮನ ನೀಡಬೇಕು. ಸಾಧನೆ – ಸಂಶೋಧನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚುರಪಡಿಸಬೇಕು. ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ಇಲಾಖೆ ನಡುವೆ ಎಂದಿಗೂ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಜೊತೆ ಸಂವಾದ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವುಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದರು.

ಇನ್ನುಮುಂದೆ ಪ್ರತಿ ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆಸಲಾಗುವುದು. ಮೇಲಿಂದ ಮೇಲೆ ಸಭೆಗಳನ್ನು ನಡೆಸುವುದರಿಂದ ಮಾಹಿತಿಯ ವಿನಿಮಯ, ಕೆಲಸದ ಪ್ರಗತಿ ಬಗ್ಗೆ ಅರಿಯಲು ಹಾಗೂ ರೈತರಿಗಾಗಿ ಇನ್ನಷ್ಟು ದುಡಿಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಮನ್ವಯ ಸಭೆಯಲ್ಲಿ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಕೃಷಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here