ಚಿತ್ರದುರ್ಗ, ಸೆಪ್ಟೆಂಬರ್ 25: (ಅಗ್ರಿಕಲ್ಚರ್ ಇಂಡಿಯಾ) ರೈತರು ಸಂಕಷ್ಟ ದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್ ಗಳು ರೈತರ ಆಸ್ತಿ ಜಪ್ತಿ ಮಾಡುವುದು ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಅವರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಅವರು ಇಂದು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಆಯೋಜಿಸಿದ್ದ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30 ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಬದ್ಧತೆಯಿಂದ ಕೆಲಸ ಮಾಡುವ ಕ್ರಿಯಾಶಕ್ತಿಯೇ ಭಕ್ತಿಯ ಶಕ್ತಿ. ಗುರುಗಳಿಂದ ಪ್ರೇರಣೆ ಪಡೆದು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ನಮ್ಮ ಪ್ರಯತ್ನ ಮಾಡಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಮಕ್ಕಳಿಗೆ ವಿದ್ಯಾನಿಧಿ ರೂಪಿಸಲಾಯಿತು. 14 ಲಕ್ಷ ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗಿದೆ. ರೈತ ಕೂಲಿಕಾರ ಮಕ್ಕಳಗೆ, ನೇಕಾರರಿಗೆ, ಮೀನುಗಾರರಿಗೆ, ಆಟೋ ರಿಕ್ಷಾ ಚಾಲಕರು ಹಾಗೂ ಟ್ಯಾಕ್ಸಿ ಚಾಲಕರಿಗೆ ಯೋಜನೆ ವಿಸ್ತರಣೆಯಾಗಿದೆ. ಶಿಕ್ಷಣದಿಂದ ಉದ್ಯೋಗ ನೀಡಬಹುದೆಂದು ಯೋಜನೆ ರೂಪಿಸಲಾಗಿದೆ ಎಂದರು.
ರಾಜ್ಯದ ರೈತರ ಮಕ್ಕಳು ಹಣದ ಕೊರತೆಯಿಂದ ಓದು ನಿಲ್ಲಿಸಬಾರದು, ಅವರ ಭವಿಷ್ಯ ಉಜ್ವಲವಾಗಿ ನಿರ್ಮಾಣವಾಗಲಿ ಎಂದು ಈ ಕೆಲಸ ಮಾಡಲಾಗಿದೆ. ನೀರಾವರಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. 3 ಲಕ್ಷ ದವರೆಗೆ ಬಡ್ಡಿರಹಿತ ಸಾಲ ನೀಡಿದರೂ ಅತಿವೃಷ್ಟಿ, ಅನಾವೃಷ್ಟಿ ಕಾರಣದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ವರ್ಷ ಉತ್ತಮ ಮಳೆಯಾಗಿದೆ. ಕೆರೆ ಕಟ್ಟೆ ತುಂಬಿ ನೀರು ಇನ್ನು 2-3 ವರ್ಷಗಳಿಗೆ ತೊಂದರೆ ಇಲ್ಲ. ಕೆಲವೆಡೆ ಪ್ರವಾಹವಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ರಾಷ್ಟ್ರೀಯ ಯೋಜನೆ
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುವ ಅಂತಿಮ ಘಟ್ಟದಲ್ಲಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಅದರ ಅನುಮೋದನೆ ದೊರೆತ ಕೂಡಲೇ 14 ಸಾವಿರ ಕೋಟಿ ರೂ.ಗಳ.ನೆರವು ನಮಗೆ ಬರಲಿದೆ. ಇದನ್ನು ಪೂರ್ಣ ಮಾಡಲು ಹಣಕಾಸಿನ ಶಕ್ತಿ ದೊರೆಯುತ್ತದೆ ಎಂದರು.
ಚುಣಾವಣಾ ಗಿಮಿಕ್, ಬಿಟ್ಟಿ ಕೋಟ್ಟರೇ ಬಾಯಿಬಡುಕೋತಾರಲ್ಲಾ ಇದು ಸರಿಯೇ, ಇದು ಯಾರಪ್ಪಂದು