ನಾಳೆಯಿಂದ ಅಂದರೆ ನವೆಂಬರ್ 17 ರಿಂದ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ದ ಆವರಣದಲ್ಲಿ ಕೃಷಿಮೇಳ ಆರಂಭವಾಗಲಿದೆ. ಒಟ್ಟು 625 ಮಳಿಗೆಗಳು ಇರುತ್ತವೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ಮಳಿಗೆಗಳು, ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು / ಸಂಸ್ಥೆಗಳು, ಅಭಿವೃದ್ಧಿ ಇಲಾಖೆಗಳ ಮಳಿಗೆಗಳು, ಕೃಷಿ ಪರಿಕರಗಳ ಮಳಿಗೆಗಳು, ಕೃಷಿ ಇಂಜಿನಿಯರಿಂಗ್ ಮತ್ತು ಪಶುಸಂಗೋಪನೆ ಮಳಿಗೆಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಪ್ರದರ್ಶನ. ರೈತರ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ತಜ್ಞ ವಿಜ್ಞಾನಿಗಳ ತಂಡದಿಂದ ಕೃಷಿ ಸಂಬಂಧಿ ಪ್ರಶ್ನೆಗಳಿಗೆ ಭೌತಿಕವಾಗಿ ಮತ್ತು ಜೂಮ್ ಸಭೆ ಮೂಲಕ ನೇರ ಪರಿಹಾರ, ಪ್ರಾತ್ಯಕ್ಷಿಕಾ ತಾಕುಗಳು, ಮಳಿಗೆಗಳು ಮತ್ತು ಕೃಷಿ ಮೇಳದ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು, ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವ, ಔಷಧೀಯ ಮತ್ತು ಸುಗಂಧದ್ರವ್ಯ ಸಸ್ಯಗಳು, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿಗಳು, ಸಮಗ್ರ ಪೋಷಕಾಂಶಗಳು ಹಾಗೂ ಪೀಡೆ ನಿರ್ವಹಣೆ, ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು.
ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ, ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ, ಮಾರುಕಟ್ಟೆ ನೈಪುಣ್ಯತೆ ಮಾಹಿತಿ, ಹವಾಮಾನ ಚತುರ ಕೃಷಿ, ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ
- ಜಿ.ಕೆ.ವಿ.ಕೆ ಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಉಚಿತ ಸಾರಿಗೆ ವ್ಯವಸ್ಥೆ.
- ಪ್ರತ್ಯೇಕ ವಾಹನ ನಿಲುಗಡೆ ವ್ಯವಸ್ಥೆ.
- ಉಚಿತ ಪ್ರವೇಶ
- ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ.
ಇನ್ನಿತರ ವಿಶೇಷತೆಗಳು:
ಐದು ಹೊಸ ತಳಿಗಳ ಬಿಡುಗಡೆ. ಕೃಷಿ ಸಾಧಕರಿಗೆ ಪುರಸ್ಕಾರ. ಬೀಜಸಂತೆ. ಸಿರಿಧಾನ್ಯಗಳ ಆಹಾರ ಮೇಳ. ಬರ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು. ಭೌತಿಕವಾಗಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ತಾಕುಗಳು.
ಸಿರಿಧಾನ್ಯಗಳು ಹಾಗೂ ಮಹತ್ವ. ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು. ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ. ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು. ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು. ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ. ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ. ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ. ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ . ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ. ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯಗಳು. ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ. ಜಲಾನಯನ ನಿರ್ವಹಣೆ. ಮಾರುಕಟ್ಟೆ ನೈಪುಣ್ಯತೆ ಮಾಹಿತಿ. ಸಾವಯವ ಕೃಷಿ ಪದ್ಧತಿಗಳು. ಹವಾಮಾನ ವೈಪರಿತ್ಯ ಕೃಷಿ. ಸಮಗ್ರ ಪೋಷಕಾಂಶಗಳು ಹಾಗೂ ಪೀಡೆ ನಿರ್ವಹಣೆ. ಕೃಷಿಯಲ್ಲಿ ನೂತನ ತಂತ್ರಜ್ಞಾನಗಳ ಮಾಹಿತಿ. ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ. ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ. ಮಣ್ಣು ರಹಿತ ಕೃಷಿ. ರೈತರ ಆವಿಷ್ಕಾರಗಳು ಮತ್ತು ಕೃಷಿ ನವೋಧ್ಯಮಗಳು ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ
ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ. ಕೃಷಿ ಆಟೋಮೇಷನ್ ತಂತ್ರಜ್ಞಾನಗಳು. ಐದು ಹೊಸ ತಳಿಗಳ ಬಿಡುಗಡೆ. ಕೃಷಿ ಸಾಧಕರಿಗೆ ಪುರಸ್ಕಾರ. ಬೀಜಸಂತೆ. ಸಿರಿಧಾನ್ಯಗಳ ಆಹಾರ ಮೇಳ. ಬರ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು. ಭೌತಿಕವಾಗಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ತಾಕುಗಳು.