ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ

0

ಸೋಮವಾರ, 17 ನೇ  ಏಪ್ರಿಲ್  2023 / 27 ನೇ ಚೈತ್ರ  1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ಉತ್ತರ ಒಳನಾಡಿನ  ಒಂದೆರಡು ಕಡೆಗಳಲ್ಲಿ ಮಳೆಯಾಗಿದೆಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು.

ಮಳೆಯ ಪ್ರಮಾಣ (ಸೆಂ.ಮೀನಲ್ಲಿ):   ಕಲಬುರ್ಗಿ 3; ಮಹಾಗಾವ್ (ಕಲಬುರ್ಗಿ ಜಿಲ್ಲೆ) 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

19 ನೇ ಏಪ್ರಿಲ್ 2023 ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳುಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆಕರಾವಳಿ ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಮತ್ತು  ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ

ಗರಿಷ್ಠ ಉಷ್ಣಾಂಶದ ಎಚ್ಚರಿಕೆ :   ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 – 3 ಡಿಗ್ರಿ ಸೆಲ್ಷಿಯಸ್ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

 ಮೀನುಗಾರರಿಗೆ ಎಚ್ಚರಿಕೆಇಲ್ಲ

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 34  ಮತ್ತು ಕನಿಷ್ಠ ಉಷ್ಣಾಂಶ 21  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

 ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35  ಮತ್ತು ಕನಿಷ್ಠ ಉಷ್ಣಾಂಶ 21  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

 

LEAVE A REPLY

Please enter your comment!
Please enter your name here