ಹವಾಮಾನ ಮುನ್ಸೂಚನೆ; ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ

0

ಬುಧವಾರ, 13 ನೇ ಸೆಪ್ಟೆಂಬರ್ 2023 / 22ನೇ ಭಾದ್ರಪದ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಚನ್ನಪಟ್ಟಣ (ರಾಮನಗರ ಜಿಲ್ಲೆ) 3; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ), ಮಡಿಕೇರಿ ಎಡಬ್ಲ್ಯುಎಸ್ ತಲಾ 2; ಮಂಗಳೂರು, ಮಾಣಿ, ಪುತ್ತೂರು (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಮುರುಗೋಡ (ಬೆಳಗಾವಿ ಜಿಲ್ಲೆ), ಕೊಪ್ಪಳ ಎಡಬ್ಲ್ಯೂಎಸ್, ವಿರಾಜಪೇಟೆ (ಕೊಡಗು ಜಿಲ್ಲೆ), ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ) ತಲಾ 1.

15 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

15 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here