ಗುರುವಾರ, 23 ನೇ ಮಾರ್ಚ್ 2023 / 02 ನೇ ಚೈತ್ರ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ) ಇಲ್ಲ
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 36.0 o ಡಿ.ಸೆ. ಕಲ್ಬುರ್ಗಿ ಯಲ್ಲಿ ದಾಖಲಾಗಿದೆ. ಅತೀ ಕನಿಷ್ಠ ಉಷ್ಣಾಂಶ 14.0o ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
25 ನೇ ಮಾರ್ಚ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ:
ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್ ಕಮ್ಮಿಯಾಗುವ ಸಾಧ್ಯತೆ ಇದೆ.
ಕನಿಷ್ಠ ಉಷ್ಣಾಂಶದ ಎಚ್ಚರಿಕೆ:
ಮುಂದಿನ 48 ಗಂಟೆಗಳಲ್ಲಿ : ಕನಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಮ್ಮಿಯಾಗುವ ಸಾಧ್ಯತೆ ಇದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.































