ಕರ್ನಾಟಕ ಹವಾಮಾನ ಮುನ್ಸೂಚನೆ ; ಗುಡುಗು ಮಿಂಚಿನ ಸಾಧ್ಯತೆ

0

ಶನಿವಾರ, 08 ನೇ  ಏಪ್ರಿಲ್  2023 / 18 ನೇ ಚೈತ್ರ  1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ):  ಗೋಕಾಕ್ (ಬೆಳಗಾವಿ ಜಿಲ್ಲೆ) 5; ಬೈಲಹೊಂಗಲ (ಬೆಳಗಾವಿ ಜಿಲ್ಲೆ), ಔರಾದ್ (ಬೀದರ್ ಜಿಲ್ಲೆ) ತಲಾ 3; ಮುಂಡಗೋಡ (ಉತ್ತರ ಕನ್ನಡ ಜಿಲ್ಲೆ), ನರಗುಂದ (ಗದಗ ಜಿಲ್ಲೆ), ಬೆಳಗಾವಿ, ಖಜೂರಿ (ಕಲಬುರ್ಗಿ ಜಿಲ್ಲೆ), ಹುಮನಾಬಾದ್ (ಬೀದರ್ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 1.

10 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು:

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು  ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳು  ಮತ್ತು  ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.  ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮತ್ತು  ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.  ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು:

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ಘಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಕರಾವಳಿಯ ಎಲ್ಲಾ ಜಿಲ್ಲೆಗಳು  ಮತ್ತು  ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮತ್ತು  ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:  ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.  ಗರಿಷ್ಠ ಉಷ್ಣಾಂಶ 34  ಮತ್ತು ಕನಿಷ್ಠ ಉಷ್ಣಾಂಶ 23  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.  ಗರಿಷ್ಠ ಉಷ್ಣಾಂಶ 34  ಮತ್ತು ಕನಿಷ್ಠ ಉಷ್ಣಾಂಶ 23  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here