ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ

0

ಶನಿವಾರ, 01 ನೇ ಏಪ್ರಿಲ್ 2023 / 11 ನೇ ಚೈತ್ರ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಭಾರೀ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ರಾಯಲ್ಪಾಡು (ಕೋಲಾರ ಜಿಲ್ಲೆ) 7. ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ) 3. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 38.0 ಡಿ.ಸೆ. ಕಲಬುರ್ಗಿಯಲ್ಲಿ ದಾಖಲಾಗಿದೆ.

03 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ , ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here