ಗುರುವಾರ, 26ನೇ ಅಕ್ಟೋಬರ್ 2023 /03 ನೇ ಕಾರ್ತಿಕ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಇಲ್ಲ.
ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.9 ಡಿ.ಸೆ ಕಾರವಾರ ದಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 13.4 ಡಿ.ಸೆ. ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ.
28ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ; ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಹಾಸನ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.
ಕನಿಷ್ಠ ಉಷ್ಣಾಂಶಗಳು
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ರಾಯಚೂರು, ವಿಜಯಪುರ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.
ಬಿರುಗಾಳಿಯ ಮುನ್ನೆಚ್ಚರಿಕೆ: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
28 ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ