ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದೆ

0

ಮಂಗಳವಾರ, 26ನೇ ಮಾರ್ಚ್ 2024/06ನೇ ಚೈತ್ರ, 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಗರಿಷ್ಠ ಉಷ್ಣಾಂಶ 39.9 ಡಿ.ಸೆ ಬಾಗಲಕೋಟೆಯಲ್ಲಿ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 18.0 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ. 28ನೇ ಮಾರ್ಚ್ 2024 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಇಲ್ಲ.

ಭಾರಿ ಮಳೆ ಮುನ್ನೆಚ್ಚರಿಕೆ: ಇಲ್ಲ.

ತಾಪಮಾನದ ಮುನ್ಸೂಚನೆ: ಇಲ್ಲ.

ಮುಂದಿನ 48 ಗಂಟೆಗಳು: ಇಲ್ಲ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

28ನೇ ಮಾರ್ಚ್ 2024 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here