ಸೋಮವಾರ 23ನೇ ಅಕ್ಟೋಬರ್ 2023 /31 ನೇ ಆಶ್ವೀಜ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) & ಭಾಗಮಂಡಲ (ಕೊಡಗು ಜಿಲ್ಲೆ) ತಲಾ 1. ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.6 ಡಿ.ಸೆ ಶಿರಾಳಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 15.6 ಡಿ.ಸೆ. ಬೀದರ್ ನಲ್ಲಿ ದಾಖಲಾಗಿದೆ.
25 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ;ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
25 ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.