ರಾಜ್ಯದಲ್ಲಿ ಮುಂದುವರಿದ ಒಣಹವೆ ಆರ್ಭಟ

0

ಬುಧವಾರ, 19 ನೇ  ಏಪ್ರಿಲ್  2023 / 29 ನೇ ಚೈತ್ರ  1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ರಾಜ್ಯದಾದ್ಯಂತ ಒಣಹವೆ ಇತ್ತು.  ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಇಲ್ಲ

 ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

 21 ನೇ ಏಪ್ರಿಲ್ 2023 ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳುದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

 ಮುಂದಿನ 48 ಘಂಟೆಗಳು: ಕರಾವಳಿಯ  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.   ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ  ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ

 ಗರಿಷ್ಠ ಉಷ್ಣಾಂಶದ ಎಚ್ಚರಿಕೆ

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3  ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

 ಮೀನುಗಾರರಿಗೆ ಎಚ್ಚರಿಕೆಇಲ್ಲ

 ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

 ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

 ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36  ಮತ್ತು ಕನಿಷ್ಠ ಉಷ್ಣಾಂಶ 22  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

 ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆಗರಿಷ್ಠ ಉಷ್ಣಾಂಶ 35  ಮತ್ತು ಕನಿಷ್ಠ ಉಷ್ಣಾಂಶ 23  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ

LEAVE A REPLY

Please enter your comment!
Please enter your name here