ಅಕ್ಟೋಬರ್ 16: ಮಳೆ ಕರ್ನಾಟಕದ ಉದ್ದಗಲಕ್ಕೂ ಆಗುತ್ತಿದೆ. ಕೆರೆಕಟ್ಟೆಗಳು ತುಂಬಿವೆ.ಆದರೆ ಕೆಲವು ಕಡೆ ಪ್ರವಾಹ ಆಗಿದೆ. ಜನವಸತಿ ತೊಂದರೆಯಾಗಿದ್ದು, ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು.
ಅವರು ಇಂದು ಶ್ರೀ ಮಲೆಮಹಾದೇಶ್ವರ ಕುಂಭಮೇಳದ ಸಾಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಂಡ್ಯಕ್ಕೆ ಸಂಬಂಧಿಸಿದಂತೆ ವೀಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಬೆಳೆ ನಾಶಕ್ಕೆ 2.30 ಕೋಟಿ ರೈತರಿಗೆ ಪರಿಹಾರವನ್ನು ಒದಗಿಸಲಾಗಿದೆ. ಅದರ ಜೊತೆಗೆ ಇಬ್ಬರು ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಿದೆ. ಬಿದ್ದುಹೋಗಿದ್ದ 304 ಮನೆಗಳಿಗಳಿಗೆ 100ಕ್ಕೆ 100 ಪರಿಹಾರ ನೀಡಲಾಗಿದೆ. ಮತ್ತೆ ಒಂದು ವಾರದಿಂದ ಆಗುತ್ತಿರುವ ಮಳೆಗೆ ಕೂಡಲೇ ಬೆಲೆ ನಾಶ, ಮನೆಗಳಿಗೆ ಸಂಬಂಧಿಸಿದಂತೆ ವರದಿ ನೀಡಿದರೆ ಕೂಡಲೇ ಪರಿಹಾರ ನೀಡಲಾಗುವುದು ಎಂದರು.
ಬೆಳೆ ನಾಶ ಆದಾಗ ಪರಿಹಾರ ಒಂದೂವರೆ ವರ್ಷ ಆಗುತ್ತಿತ್ತು. ನಾನು ಮುಖ್ಯ ಮಂತ್ರಿ ಆದಾಗಿನಿಂದ ಒಂದೂವರೆ ತಿಂಗಳಲ್ಲಿ ಡಿಬಿಟಿ ಮುಖಾಂತರ ಪರಿಹಾರ ವಿತರಣೆಯಾಗುತ್ತಿದೆ. ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ಹೋಗುತ್ತಿದೆ. ಪರಿಹಾರವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ ಎಂದು ಹೇಳಿದರು.
ಒಣಬೇಸಾಯಕ್ಕೆ 13600ರೂ., ನೀರಾವರಿಗೆ 25 ಸಾವಿರ ಪರಿಹಾರ ನೀಡುತ್ತಿದ್ದೇವೆ. ತೋಟಗಳಿಗೆ ಕೇಂದ್ರ 18 ಸಾವಿರ ರೂ.ಗಳನ್ನು ನೀಡಿದರೆ ರಾಜ್ಯ ಸರ್ಕಾರ 28 ಸಾವಿರ ರೂ.ಗಳನ್ನು ನೀಡುತ್ತಿದೆ . ಮನೆಗಳಿಗೆ ಕೇಂದ್ರ ಸರ್ಕಾರ 95 ಸಾವಿರ ರೂ. ನೀಡುತ್ತದೆ. ನಾವು ಪೂರ್ಣ ಬಿದ್ದಿರುವ ಮನೆಗಳಿಗೆ 5 ಲಕ್ಷ, ಭಾಗಶಃ ಹಾಳಾಗಿರುವ ಮನೆಗಳಿಗೆ 3 ಲಕ್ಷ, ಹಾಗೂ ಸ್ವಲ್ಪ ಹಾಳಾಗಿರುವ ಮನೆಗಳಿಗೆ 50 ಸಾವಿರ ರೂ.ಗಳನ್ನು ನೀಡುತ್ತಿದ್ದೇವೆ ಎಂದು ವಿವರಿಸಿದರು.
ಹಿಂದೆ ಈ ರೀತಿ ಪ್ರಕ್ರಿಯೆಗಳಾಗುತ್ತಿರಲಿಲ್ಲ. ಮನೆಗಳ ಜೊತೆಗೆ ಬೆಳೆಗಳ ನಾಶಕ್ಕೆ ಎರಡು ಪಟ್ಟುಪರಿಹಾರ ನೀಡುತ್ತಿರುವುದು ಬಿಜೆಪಿ ಸರ್ಕಾರ. ರೈತರ ಪರವಾಗಿ ನಾವು ಇದ್ದು, ಏನೇ ಸಂಕಷ್ಟ ಬಂದರೂ ಅವರೊಂದಿಗೆ ನಿಲ್ಲುತ್ತೇವೆ ಎಂದರು.