ಬೆಂಗಳೂರು: ಅಕ್ಟೋಬರ್ 17: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕರ್ನಾಟಕದ ರಾಜ್ಯದ 50. 36 ಲಕ್ಷ ರೈತರ ಖಾತೆಗೆ 1007.26 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಯಿತು
ಪ್ರಧಾನ ಮಂತ್ರಿ ಅವರು ಉದ್ಘಾಟಿಸಿದ ಈ ಕಾರ್ಯಕ್ರಮವನ್ನು ಬೆಂಗಳೂರಿನಿಂದ ಆನ್ ಲೈನ್ ಮೂಲಕ ವರ್ಚುವಲ್ ಆಗಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ವೀಕ್ಷಿಸಿದರು.
ಸಚಿವ ಸಂಪುಟದ ಸದಸ್ಯರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಈ ಕಾರ್ಯಕ್ರಮ ವೀಕ್ಷಿಸಬಹುದು.