ಬೆಂಗಳೂರು ಕೃಷಿ ಮೇಳದ ವೈಶಿಷ್ಟಗಳು

0

ಕೃಷಿ ವಸ್ತು ಪ್ರದರ್ಶನ

ನವೆಂಬರ್ 3 ರಿಂದ 6 ರ ತನಕ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆಯಲ್ಲಿ ಕೃಷಿಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ಕೃ.ವಿ.ವಿ, ಬೆಂಗಳೂರು ಮಳಿಗೆಗಳು, ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು / ಸಂಸ್ಥೆಗಳು, ಅಭಿವೃದ್ಧಿ ಇಲಾಖೆಗಳ ಮಳಿಗೆಗಳು, ಕೃಷಿ ಪರಿಕರಗಳ ಮಳಿಗೆಗಳು, ಕೃಷಿ ಇಂಜಿನಿಯರಿAಗ್ ಮತ್ತು ಪಶುಸಂಗೋಪನೆ ಮತ್ತು ಕೃಷಿ ವಿಶ್ವವಿದ್ಯಾನಿಲಯದ ನೂತನ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗುವುದು

ಕೃಷಿ ಸಮಸ್ಯೆಗಳ ಪರಿಹಾರಕ್ಕೆ ಸಲಹೆ :

ರೈತರ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ತಜ್ಞ ವಿಜ್ಞಾನಿಗಳ ತಂಡದಿಂದ ಕೃಷಿ ಸಂಬಂಧಿ ಪ್ರಶ್ನೆಗಳಿಗೆ ಭೌತಿಕವಾಗಿ ಮತ್ತು ಜೂಮ್ ಸಭೆ ಮೂಲಕ ನೇರ ಪರಿಹಾರ, ಪ್ರಾತ್ಯಕ್ಷಿಕಾ ತಾಕುಗಳು, ಮಳಿಗೆಗಳು ಮತ್ತು ಕೃಷಿ ಮೇಳದ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣಗಳÀಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು, ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವ, ಔಷಧೀಯ ಮತ್ತು ಸುಗಂಧದ್ರವ್ಯ ಸಸ್ಯಗಳು, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿಗಳ ವಿವರಗಳನ್ನು ನೀಡಲಾಗುವುದು

ಸಮಗ್ರ ಪೋಷಕಾಂಶಗಳು ಹಾಗೂ ಪೀಡೆ ನಿರ್ವಹಣೆ, ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲಿನೋತ್ತರ ತಾಂತ್ರಿಕತೆ ವಿವರಗಳು ದೊರೆಯುತ್ತವೆ.

ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ, ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ, ಮಾರುಕಟ್ಟೆ ನೈಪುಣ್ಯತೆ ಮಾಹಿತಿ, ಹವಾಮಾನ ಚತುರ ಕೃಷಿ, ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ ಮಾಡಲಾಗುವುದು.

ಹೊಸ ತಳಿಗಳ ಬಿಡುಗಡೆ

 ಒಂಬತ್ತು ಹೊಸ ತಳಿಗಳು ಮತ್ತು 38 ತಂತ್ರಜ್ಞಾನಗಳ ಬಿಡುಗಡೆ.
 ಕೃಷಿ ಸಾಧಕರಿಗೆ ಪುರಸ್ಕಾರ.
 ಭೌತಿಕವಾಗಿ ಮತ್ತು ಸಾಮಾಜಿಕ ಜಾಲತಾಣದಲ್ಲಿ . ಪ್ರಸಾರ
 ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ತಾಕುಗಳು.

ಸುಧಾರಿತ ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು

 ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು
 ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ
 ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ
 ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ
 ಸಿರಿಧಾನ್ಯಗಳು ಹಾಗೂ ಮಹತ್ವ
 ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯಗಳು
 ಜಲಾನಯನ ನಿರ್ವಹಣೆ
 ಸಾವಯವ ಕೃಷಿ ಪದ್ಧತಿಗಳು
 ಸಮಗ್ರ ಪೋಷಕಾಂಶಗಳು, ರೋಗ ಹಾಗೂ ಪೀಡೆ ನಿರ್ವಹಣೆ
 ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ
 ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು
 ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು
 ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ
 ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ
 ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ
 ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ
 ಮಾರುಕಟ್ಟೆ ನೈಪುಣ್ಯತೆ ಮಾಹಿತಿ
 ಹವಾಮಾನ ಚತುರ ಕೃಷಿ
 ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ
 ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ
 ರೈತ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ಹಾಗೂ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ
 ಮಣ್ಣುರಹಿತ ಕೃಷಿ

ಕೃಷಿ ಸಾಧಕರಿಗೆ ಪುರಸ್ಕಾರ

ರಾಜ್ಯ ಮಟ್ಟದ ಪ್ರಶಸ್ತಿಗಳು: ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುವುದು,

1. ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ
2. ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ
3. ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ
4. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
5. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತ ಮಹಿಳೆ ಪ್ರಶಸ್ತಿ

ಜಿಲ್ಲಾ ಮಟ್ಟದ ಪ್ರಶಸ್ತಿಗಳು

ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ 10 ಜಿಲ್ಲೆಗಳಲ್ಲಿ ಪ್ರಗತಿಪರ ರೈತ ಪ್ರಶಸ್ತಿ ಮತ್ತು ಪ್ರಗತಿಪರ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿ ಪರ ರೈತ ಮತ್ತು ರೈತ ಮಹಿಳೆಯರಿಗೆ ನೀಡಲಾಗುವುದು.

ತಾಲ್ಲೂಕು ಮಟ್ಟದ ಪ್ರಶಸ್ತಿಗಳು
ತಾಲ್ಲೂಕು ಮಟ್ಟದ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಯುವ ರೈತ ಮಹಿಳಾ ಪ್ರಶಸ್ತಿ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ 61 ತಾಲ್ಲೂಕುಗಳಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಪ್ರಗತಿಪರ ಯುವ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿಪರ ಯುವ ರೈತ ಮತ್ತು ಪ್ರಗತಿಪರ ಯುವ ರೈತ ಮಹಿಳೆಯರಿಗೆ ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ವಿಶೇಷ ಸವಲತ್ತುಗಳು
• ಜಿ.ಕೆ.ವಿ.ಕೆ ಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಉಚಿತ ಸಾರಿಗೆ ವ್ಯವಸ್ಥೆ.
• ಪ್ರತ್ಯೇಕ ವಾಹನ ನಿಲುಗಡೆ ವ್ಯವಸ್ಥೆ.
• ಉಚಿತ ಪ್ರವೇಶ
• ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ.

LEAVE A REPLY

Please enter your comment!
Please enter your name here