ನವದೆಹಲಿ ಏ 8: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದ 2.57 ಲಕ್ಷ ಟನ್ ಬೇಡಿಕೆಯಿದ್ದು, ಬೇಡಿಕೆಯನ್ನು ಪುರೈಸಲು ಕೇಂದ್ರ ಸಿದ್ಧವಿಧ. ಹೀಗಾಗಿ ರೈತರು ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.
ಲಾಕ್ಡೌನ್ ನಿಂದಾಗಿ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿದೆ.
ರಸಗೊಬ್ಬರ ಕಾರ್ಖಾನೆಗಳು, ಗೋಡಾನುಗಳು, ಬಂದರಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ. ಹಾಗಿಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ. ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ.
ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು. ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ. ದಾಸ್ತಾನು ಸಾಕಷ್ಟಿದೆ. ಬೇಕಾದಷ್ಟು ಗೊಬ್ಬರ ಪೂರೈಸುವ ಜವಾಬ್ಧಾರಿ ನಮ್ಮದು. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೇ ರೈತರು ನಿರಾತಂಕವಾಗಿ ಮುಂಗಾರು ಬಿತ್ತನೆಗೆ ತಯಾರಿಮಾಡಿಕೊಳ್ಳಿ ಎಂದು ವಿನಂತಿಸಿದ್ದಾರೆ.
ಜನೌಷಧಿ ಸರಬರಾಜು ಮಾಡುವ ಸೌಲಭ್ಯವನ್ನು ಆರಂಭಿಸಲಾಗಿದೆ. ಅಗತ್ಯವಿರುವವರು ವಿಶೇಷವಾಗಿ ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅದಕ್ಕಾಗಿ ನಿಮ್ಮ ಸ್ಮಾರ್ಟ್ ಫೋನಿನಲ್ಲಿ ನಮ್ಮ ಸರ್ಕಾರವೇ ಅಭಿವೃದ್ಧಿಪಡಿಸಿರುವ ‘ಜನೌಷಧಿ ಸುಗಮ್, ಎಂಬ ಆ್ಯಪ್ ರೂಪಿಸಲಾಗಿದೆ. ಎಂಡ್ರಾಯ್ಡ್ ಫೋನಿಗಾಗಿ ಇಲ್ಲಿ https://play.google.com/store/apps/details?id=in.gov.pmbjp… ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ. ಈ ಆ್ಯಪ್ನಲ್ಲಿ ನಿಮ್ಮ ಹತ್ತಿರದ ಜನೌಷಧಿ ಕೇಂದ್ರ (ವಿಳಾಸ ಸಮೇತ), ಆ ಕೇಂದ್ರದ ಲೊಕೇಶನ್ ಮ್ಯಾಪ್, ಕೇಂದ್ರದಲ್ಲಿ ನಿಮಗೆ ಬೇಕಾದ ಔಷಧಿ ಲಭ್ಯತೆ ಇದೆಯೋ ಅಥವಾ ಇಲ್ಲವೋ, ಅಂಗಡಿಯ ದೂರವಾಣಿ ನಂಬರ್ – ಹೀಗೆ ಎಲ್ಲ ವಿವರಗಳು ಲಭ್ಯವಿದೆ ಎಂದು ಸದಾನಂದಗೌಡ ಮಾಹಿತಿ ನೀಡಿದ್ದಾರೆ.
Online fresh grapes selling is a Strategy. But Consumers cannot buy more Quantities. Smaller packets for domestic requirements in urban regions are ideal. Even local Courier delivery agents can be entrusted St Govt fixed handing over fees. Thus major cities & towns can be covered easily