ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

0

ಬುಧವಾರ, 07 ನೇ ಜೂನ್ 2023 / 17 ನೇ ಜ್ಯೈಷ್ಠಾ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಹೊಳೆಹೊನ್ನೂರು (ಶಿವಮೊಗ್ಗ ಜಿಲ್ಲೆ), ಚನ್ನರಾಯಪಟ್ಟಣ (ಹಾಸನ ಜಿಲ್ಲೆ) ತಲಾ 3; ಮಹಾಗಾವ್ (ಕಲಬುರ್ಗಿ ಜಿಲ್ಲೆ), ಶೋರಪುರ (ಯಾದಗಿರಿ ಜಿಲ್ಲೆ) ತಲಾ 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

09 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಷಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿಮೀ ಇಂದ 60 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

09 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here