ರೈತಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ 14 ಲಕ್ಷ ಮಂದಿ ರೈತಮಕ್ಕಳಿಗೆ ವಿದ್ಯಾನಿಧಿ ಕೊಡುತ್ತಿದ್ದೇವೆ. ರೈತಕೂಲಿಕಾರರು, ಮೀನುಗಾರರು, ನೇಕಾರರು, ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿದಿ ಯೋಜನೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.
ಅಕ್ಟೋಬರ್ 16 ರಂದು 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಅವರು ಉದ್ಘಾಟಿಸಿ, ಮಾತನಾಡಿದರು.
ಈಗಾಗಲೇ 1 ಲಕ್ಷ ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಇದೇ ವರ್ಷ ವಿತರಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು.