ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

0

ಭಾನುವಾರ, 10 ನೇ ಸೆಪ್ಟೆಂಬರ್ 2023 / 19ನೇ ಭಾದ್ರಪದ 1945 ಶಕ: ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ; ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ) ತಲಾ 5; ಪಣಂಬೂರು, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಕೆಂಭಾವಿ (ಯಾದಗಿರಿ ಜಿಲ್ಲೆ) ತಲಾ 4; ಕಾರ್ಕಳ, ಸಿದ್ದಾಪುರ (ಎರಡೂ ಉಡುಪಿ ಜಿಲ್ಲೆ), ಜೇವರ್ಗಿ, ನೆಲೋಗಿ, ಯಡ್ರಾಮಿ (ಎಲ್ಲವೂ ಕಲಬುರ್ಗಿ ಜಿಲ್ಲೆ), ಶೋರಾಪುರ (ಯಾದಗಿರಿ ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ) ತಲಾ 3; ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ, ಕೋಟ, ಕುಂದಾಪುರ (ಎರಡೂ ಉಡುಪಿ ಜಿಲ್ಲೆ), ಕುಮಟಾ (ಉತ್ತರ ಕನ್ನಡ ಜಿಲ್ಲೆ), ನಿಪ್ಪಾಣಿ (ಬೆಳಗಾವಿ ಜಿಲ್ಲೆ), ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ), ಚಿಂಚೋಳಿ, ಸುಳೆಪೇಟೆ (ಎರಡೂ ಕಲಬುರ್ಗಿ ಜಿಲ್ಲೆ), ಶಹಾಪುರ, ಸೈದಾಪುರ (ಎರಡೂ ಯಾದಗಿರಿ ಜಿಲ್ಲೆ), ಶೃಂಗೇರಿ, ಜಯಪುರ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ಮಾಣಿ (ದಕ್ಷಿಣ ಕನ್ನಡ ಜಿಲ್ಲೆ), ಹೊನ್ನಾವರ, ಗೇರುಸೊಪ್ಪಾ, ಗೋಕರ್ಣ, ಕದ್ರಾ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಗದಗ, ಲೋಂಡಾ (ಬೆಳಗಾವಿ ಜಿಲ್ಲೆ), ಕಲಬುರ್ಗಿ, ಕಲಬುರ್ಗಿ ಎಡಬ್ಲ್ಯೂಎಸ್, ಖಜೂರಿ, ಅಫಜಲಪುರ, ಕಮಲಾಪುರ (ಎಲ್ಲಾ ಕಲಬುರ್ಗಿ ಜಿಲ್ಲೆ), ದೇವದುರ್ಗ, ಗಬ್ಬೂರು (ಎರಡೂ ರಾಯಚೂರು ಜಿಲ್ಲೆ), ವಿರಾಜಪೇಟೆ (ಕೊಡಗು ಜಿಲ್ಲೆ), ಲಿಂಗನಮಕ್ಕಿ, ತಾಳಗುಪ್ಪ (ಎರಡೂ ಶಿವಮೊಗ್ಗ ಜಿಲ್ಲೆ), ಕೊಪ್ಪ, ಬಾಳೆಹೊನ್ನೂರು (ಎರಡೂ ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ), ರಾಮನಗರ ತಲಾ 1.

12 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.
ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

12 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here