ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

0

ಗುರುವಾರ, 30 ನೇ  ಮಾರ್ಚ್ 2023 / 09 ನೇ ಚೈತ್ರ  1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.  ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ):  ಮೈಸೂರು 3; ಬಂಡೀಪುರ (ಚಾಮರಾಜನಗರ ಜಿಲ್ಲೆ), ಚನ್ನಪಟ್ಟಣ (ರಾಮನಗರ ಜಿಲ್ಲೆ) ತಲಾ 2; ಚಾಮರಾಜನಗರ, ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ) ತಲಾ 1.

ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.7 ಡಿ.ಸೆ. ಕಲಬುರ್ಗಿಯಲ್ಲಿ  ದಾಖಲಾಗಿದೆ. ಕನಿಷ್ಠ ಉಷ್ಣಾಂಶ 13.6  ಡಿ.ಸೆ.  ಬಾಗಲಕೋಟೆಯಲ್ಲಿ ದಾಖಲಾಗಿದೆ.

01 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.  ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು:  ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಎಚ್ಚರಿಕೆ: ಇಲ್ಲ.

ಕನಿಷ್ಠ ಉಷ್ಣಾಂಶದ ಎಚ್ಚರಿಕೆ:

ಮುಂದಿನ 48 ಗಂಟೆಗಳಲ್ಲಿ : ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 – 4  ಡಿಗ್ರಿ ಸೆಲ್ಷಿಯಸ್ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ 2 – 3 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:  ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿದ್ದು, ಸಂಜೆ/ರಾತ್ರಿಯ ವೇಳೆಗೆ ಮೋಡ ಮುಸುಕಿದ ವಾತಾವರಣವಿರುತ್ತದೆ ಹಾಗೂ  ಮಳೆ/ಗುಡುಗಿನಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 33  ಮತ್ತು ಕನಿಷ್ಠ ಉಷ್ಣಾಂಶ 23  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here