ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಸಹಕಾರ

0

ಮೀನುಗಾರಿಕೆ, ಮೀನು ಆಹಾರ ಉತ್ಪಾದನೆ, ಮಾರುಕಟ್ಟೆ ವ್ಯವಸ್ಥೆ, ರಫ್ತು , ಸ್ಥಳೀಯ ಮಾರುಕಟ್ಟೆ, ಹೀಗೆ  ಮೀನುಗಾರಿಕೆಯ ವಿವಿಧ ವಲಯಗಳಿಗೆ ಈಗ ಬಹಳ ಅವಕಾಶಗಳಿವೆ. ಖಾಸಗಿ ವಲಯದವರು ಆಸಕ್ತಿವಹಿಸಿ ಬಂದರೆ, ಮಾರುಕಟ್ಟೆ ವ್ಯವಸ್ಥೆ, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ನೀಡಲು  ಸರ್ಕಾರ ಸಿದ್ಧವಿದೆ. ಮೀನಿನ ಸಂಸ್ಕರಣೆ, ಮೀನು ಆಹಾರ ಉತ್ಪಾದನೆಗೆ ಸರ್ಕಾರ ಸಹಕಾರ ನೀಡುತ್ತದೆ. ಮೀನುಗಾರಿಕೆ ವಲಯದಲ್ಲಿ ಖಾಸಗಿ ವಲಯದ ಆಸಕ್ತಿ, ಹೆಚ್ಚಿನ ಹೂಡಿಕೆ,ಉತ್ಪಾದನೆ, ಮಾರುಕಟ್ಟೆ ಅವಕಾಶಗಳು ಬರಬೇಕೆಂಬ ಉದ್ದೇಶದಿಂದ ಇಂದಿನ ಸಮಾವೇಶ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.

ಅಕ್ಟೋಬರ್ 16 ರಂದು 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಅವರು  ಉದ್ಘಾಟಿಸಿ, ಮಾತನಾಡಿದರು.

ಜನರ ದುಡಿಮೆಯೇ ರಾಜ್ಯದ ಆರ್ಥಿಕತೆ:

ಮೀನುಗಾರಿಕೆಯ ವಹಿವಾಟನ್ನು ಎಂಟು ಲಕ್ಷ ಕೋಟಿರೂ.ಗಳಿಗೆ ಹೆಚ್ಚಿಸುವ ಗುರಿಇದ್ದು, ಇದು ರಾಜ್ಯದ ಆಂತರಿಕ ಜಿಡಿಪಿಯನ್ನು ಹೆಚ್ಚಿಸುತ್ತದೆ. ಪ್ರಧಾನಿ ಮೋದಿಯವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ ರಾಜ್ಯದಲ್ಲಿನ ಕೃಷಿ,ಮೀನುಗಾರಿಕೆ, ಕುರಿ ಸಾಕಾಣಿಕೆ ಇವೆಲ್ಲವೂ ಕೊಡುಗೆ ನೀಡಲಿವೆ. ಕೃಷಿಯಲ್ಲಿ ಶೇ. 1 ರ ಅಭಿವೃದ್ಧಯಾದರೆ, ಶೇ.4 ರಷ್ಟು ಉತ್ಪಾದನಾ ಹಾಗೂ ಶೇ.10 ರಷ್ಟು ಅಭಿವೃದ್ಧಿ ಸೇವಾ ವಲಯದಲ್ಲಿ ಆಗುತ್ತದೆ. ಜನರ ದುಡಿಮೆಯೇ ರಾಜ್ಯದ ಆರ್ಥಿಕತೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವರಾದ   ಎಸ್. ಅಂಗಾರ, ಸಚಿವರಾದ ಡಾ. ಸಿ‌. ಎನ್. ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ, ಶಾಸಕ ಸಂಜೀವ ಮಟಂದೂರು, ಫ್ರೀಡಂ ಆ್ಯಪ್ ಸಂಸ್ಥಾಪಕ ಸಿ.ಎಸ್. ಸುಧೀರ್ , ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here