5600  ಗ್ರಾಮ ಪಂಚಾಯಿತಿಯಲ್ಲಿ  5600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ

0

ಒಳನಾಡು ಮೀನುಗಾರಿಕೆಗೂ ಪ್ರೋತ್ಸಾಹ ನೀಡಲು 5600  ಗ್ರಾಮ ಪಂಚಾಯಿತಿಯಲ್ಲಿ  5600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ ನೀಡಿದೆ. ಆಲಮಟ್ಟಿ, ಕೆ.ಆರ್.ಎಸ್ ಹಿನ್ನೀರಿನಲ್ಲಿ ವ್ಯವಸ್ಥಿತ ರೀತಿಯಲ್ಲಿ ಮೀನುಗಾರಿಕೆ ಆಗುತ್ತಿಲ್ಲ.  ಕೆಲವರೇ ಸ್ವಾಮ್ಯತೆ ಮಾಡಿಕೊಂಡಿದ್ದು, ಇದನ್ನು ತಪ್ಪಿಸಿ ಎಲ್ಲರಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.

 ಅಕ್ಟೋಬರ್ 16 ರಂದು 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಅವರು  ಉದ್ಘಾಟಿಸಿ, ಮಾತನಾಡಿದರು.

ಮೀನುಗಾರರಿಗೆ ಡೀಸಲ್ ಹಾಗೂ ಸೀಮೆ ಎಣ್ಣೆ ಸಹಾಯಧನವನ್ನು ಹೆಚ್ಚಿಸಲಾಗಿದೆ. ಪ್ರವಾಹ ಬಂದ ಸಂದರ್ಭದಲ್ಲಿ ಮೀನುಗಾರರ ಹಡುಗುಗಳು ಹಾಳಾಗುತ್ತವೆ. ಅದಕ್ಕೆ ಎನ್.ಡಿ.ಆರ್.ಎಫ್ ನಿಯಮಾವಳಿ ಪ್ರಕಾರ ಅನುದಾನ  ನೀಡಲು ಅವಕಾಶವಿಲ್ಲ. ರಾಜ್ಯ ಸರ್ಕಾರ ದಿಂದಲೇ  ಮೀನುಗಾರರ ದೋಣಿಗಳಿಗೆ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದರು.

.ಎಲ್ಲ ಬಿಬಿಎಂಪಿ ವಾರ್ಡ್ ಗಳಲ್ಲಿ ಮೀನು ಆಹಾರ ಮಳಿಗೆ ಪ್ರಾರಂಭ :

ಬಿಬಿಎಂಪಿ ವಲಯಗಳಲ್ಲಿ ಮೀನಿನ ಆಹಾರಕ್ಕೆ ಬಹಳ ಬೇಡಿಕೆಯಿದೆ. ಪ್ರತಿಯೊಂದು ವಾರ್ಡಿನಲ್ಲಿ 1500-2000   ಚ.ಮೀ.   ವಿಸ್ತೀರ್ಣದಲ್ಲಿ ಮೀನಿನ ಆಹಾರವನ್ನು ಒದಗಿಸುವ ಮಳಿಗೆಯನ್ನು ಪ್ರಾರಂಭಿಸುವ ಯೋಜನೆ ಇದೆ. ಬೆಂಗಳೂರಿನ 243 ವಾರ್ಡ್ ಗಳಲ್ಲಿಯೂ ಇದಕ್ಕೆ ಸ್ಥಳಾವಕಾಶ ಮಾಡಿಕೊಡಲಾಗುವುದು. ಖಾಸಗಿ ವಲಯದವರು ಇಲ್ಲಿ ಮಳಿಗೆಯನ್ನು ತೆರೆಯಬಹುದು.  ಬೆಂಗಳೂರು ನಗರದಲ್ಲಿ ಈ ಯೋಜನೆ ಸಫಲವಾದರೆ, ರಾಜ್ಯದ ಎಲ್ಲ ಮಹಾನಗರಪಾಲಿಕೆ ವ್ಯಾಪ್ತಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದರು.

LEAVE A REPLY

Please enter your comment!
Please enter your name here