ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆ

0

ಶುಕ್ರವಾರ, 09 ನೇ ಜೂನ್ 2023 / 19 ನೇ ಜ್ಯೈಷ್ಠಾ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕೂಡ್ಲಿಗಿ (ವಿಜಯನಗರ ಜಿಲ್ಲೆ) 4; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಬರಗೂರು (ತುಮಕೂರು ಜಿಲ್ಲೆ), ಇಳಕಲ್ (ಬಾಗಲಕೋಟೆ ಜಿಲ್ಲೆ), ಸೈದಾಪುರ (ಯಾದಗಿರಿ ಜಿಲ್ಲೆ) ತಲಾ 2; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ), ಬಿ ಬಾಗೇವಾಡಿ (ವಿಜಯಪುರ ಜಿಲ್ಲೆ), ತಾವರಗೇರಾ, ಗಂಗಾವತಿ ಏ‌ಆರ್‌ಜಿ (ಎರಡೂ ಕೊಪ್ಪಳ ಜಿಲ್ಲೆ), ಸಿರಾ, ಚಿಕ್ಕನಹಳ್ಳಿ AWS (ಎರಡೂ ತುಮಕೂರು ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಪರಶುರಾಂಪುರ (ಚಿತ್ರದುರ್ಗ ಜಿಲ್ಲೆ), ರಾಯಲ್ಪಾಡು (ಕೋಲಾರ ಜಿಲ್ಲೆ), ಹಗರಿ ಕೆವಿಕೆ (ಬಳ್ಳಾರಿ ಜಿಲ್ಲೆ) ತಲಾ 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

11 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಘಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಘಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

11 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು:

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here