ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ. ದಿನಾಂಕ: ಭಾನುವಾರ, 04ನೇ ಆಗಸ್ಟ್ 2024. ವಿತರಣೆಯ ಸಮಯ ಭಾರತೀಯ ಕಾಲಮಾನ 1200 ಗಂಟೆ
ಕರ್ನಾಟಕಕ್ಕೆ ಮುನ್ಸೂಚನೆ
ದಿನ 1 (04.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಸಂಭವಿಸುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಸಂಭವಿಸುವ ಸಾಧ್ಯತೆಯಿದೆ.
ದಿನ 2 (05.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.