ಹವಾಮಾನ ವೀಕ್ಷಣೆ: ದಕ್ಷಿಣ ಒಳನಾಡಿನ ಕೆಲವೆಡೆ ಭಾರಿಮಳೆ ಸಾಧ್ಯತೆ

0

ಸೋಮವಾರ 16 ನೇ ಅಕ್ಟೋಬರ್ 2023 /24  ನೇ  ಆಶ್ವೀಜ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈಋತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಒಂದೆರಡು ಕಡೆಗಳಲ್ಲಿ  ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):  ಹಳಿಯಾಳ (ಉತ್ತರ ಕನ್ನಡ ಜಿಲ್ಲೆ) 3. ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 34.9  ಡಿ.ಸೆ ಚಿಕ್ಕನಹಳ್ಳಿಯಲ್ಲಿ  ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 19.0 ಡಿ.ಸೆ. ವಿಜಯಪುರ  ನಲ್ಲಿ ದಾಖಲಾಗಿದೆ.

18 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ  ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ  ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಉಷ್ಣಾಂಶಗಳ ಎಚ್ಚರಿಕೆ:

ಗರಿಷ್ಠ ಉಷ್ಣಾಂಶಗಳು : ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರ್ಗಿ ರಾಯಚೂರು ಯಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆ ಯಲ್ಲಿ ಒಂದೆರಡು ಕಡೆಗಳಲ್ಲಿ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳು: ಇಲ್ಲ

ಗುಡುಗು ಮುನ್ನೆಚ್ಚರಿಕೆ:  ಮುಂದಿನ 24 ಘಂಟೆಗಳು ರಾಜ್ಯದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಿಡಿಲು ಬೀಳುವ ಸಾಧ್ಯತೆ ಇದೆ

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.

ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

18ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

LEAVE A REPLY

Please enter your comment!
Please enter your name here