ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 6.6 ಡಿ.ಸೆ. ಬಾಗಲಕೋಟೆ ನಲ್ಲಿ ದಾಖಲಾಗಿದೆ.
11 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ ಗುಡುಗು ಮುನ್ಸೂಚನೆ ಇಲ್ಲ. ಮೀನುಗಾರರಿಗೆ ಎಚ್ಚರಿಕೆ ಇಲ್ಲ.
ಭಾರೀ ಮಳೆಯ ಎಚ್ಚರಿಕೆ: ಮುಂದಿನ 48 ಗಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
11 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 23 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 23 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
Relavent news.. good information.