ಹವಾಮಾನ ವರದಿ; ಕರ್ನಾಟಕ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಭಾರಿಮಳೆ ಸಾಧ್ಯತೆ

0

ಭಾನುವಾರ 15 ನೇ ಅಕ್ಟೋಬರ್ 2023 /23 ನೇ ಆಶ್ವೀಜ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.

  • ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಬಂಡೀಪುರ (ಚಾಮರಾಜನಗರ ಜಿಲ್ಲೆ) 5; ಕನಕಪುರ (ರಾಮನಗರ ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ) ತಲಾ 4; ಮಳವಳ್ಳಿ (ಮಂಡ್ಯ ಜಿಲ್ಲೆ) 2; ಮೂಲ್ಕಿ (ದಕ್ಷಿಣ ಕನ್ನಡ ಜಿಲ್ಲೆ) 1. ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 35.8 ಡಿ.ಸೆ ಶಿರಾಳಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.2 ಡಿ.ಸೆ. ವಿಜಯಪುರ ಮತ್ತು ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ.

    17 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
    ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ: ಇಲ್ಲ
ಗರಿಷ್ಠ ಉಷ್ಣಾಂಶಗಳು : ಇಲ್ಲ
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಇಲ್ಲ
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
16ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

LEAVE A REPLY

Please enter your comment!
Please enter your name here