ಕರ್ನಾಟಕ ಕರಾವಳಿಯಲ್ಲಿ ಭಾರಿಮಳೆ ಸಾಧ್ಯತೆ

0
ಚಿತ್ರದ ಛಾಯಾಗ್ರಹಕರು: ರಘುಕುಮಾರ್ ಸಿ.

ಭಾನುವಾರ, 25 ನೇ ಜೂನ್ 2023 / 04 ನೇ ಆಷಾಢ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.
ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಕುಂದಾಪುರ, ಕೋಟ (ಎರಡೂ ಉಡುಪಿ ಜಿಲ್ಲೆ), ಮಂಕಿ (ಉತ್ತರ ಕನ್ನಡ ಜಿಲ್ಲೆ) ತಲಾ 11; ಹೊನ್ನಾವರ, ಶಿರಾಲಿ ಪಿಟಿಒ (ಎರಡೂ ಉತ್ತರ ಕನ್ನಡ ಜಿಲ್ಲೆ) ತಲಾ 9; ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ) 8; ಅಂಕೋಲಾ (ಉತ್ತರ ಕನ್ನಡ ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ) ತಲಾ 7.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಕುಮಟಾ, ಕಾರವಾರ, ಗೋಕರ್ಣ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಜೇವರ್ಗಿ (ಕಲಬುರ್ಗಿ ಜಿಲ್ಲೆ), ಮಂಠಾಳ (ಬೀದರ್ ಜಿಲ್ಲೆ) ತಲಾ 6; ಕದ್ರಾ, ಕ್ಯಾಸಲ್ ರಾಕ್ (ಎರಡೂ ಉತ್ತರ ಕನ್ನಡ ಜಿಲ್ಲೆ), ಚಿಂಚೋಳಿ, ಚಿತ್ತಾಪುರ, ಸುಲೇಪೇಟ (ಎಲ್ಲಾ ಕಲಬುರ್ಗಿ ಜಿಲ್ಲೆ) ತಲಾ 5; ಕೊಲ್ಲೂರು (ಉಡುಪಿ ಜಿಲ್ಲೆ), ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ), ಯಡ್ರಾಮಿ, ಕಮಲಾಪುರ (ಎರಡೂ ಕಲಬುರ್ಗಿ ಜಿಲ್ಲೆ), ಹುಮನಾಬಾದ್ (ಬೀದರ್ ಜಿಲ್ಲೆ), ಲಿಂಗನಮಕ್ಕಿ ಎಚ್‌ಎಂಎಸ್ (ಶಿವಮೊಗ್ಗ ಜಿಲ್ಲೆ) ತಲಾ 4; ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ಬನವಾಸಿ (ಉತ್ತರ ಕನ್ನಡ ಜಿಲ್ಲೆ), ನಾರಾಯಣಪುರ (ಯಾದಗಿರಿ ಜಿಲ್ಲೆ), ನಲ್ವತ್ವಾಡ (ವಿಜಯಪುರ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ) ತಲಾ 3; ಮಾಣಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ, ಮಂಚಿಕೆರೆ, ಯಲ್ಲಾಪುರ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಉಡುಪಿ, ಔರಾದ್ (ಬೀದರ್ ಜಿಲ್ಲೆ), ಝಲ್ಕಿ ಕ್ರಾಸ್, ಸಿಂದಗಿ (ಎರಡೂ ವಿಜಯಪುರ ಜಿಲ್ಲೆ), ಸೇಡಂ (ಕಲಬುರ್ಗಿ ಜಿಲ್ಲೆ), ಸೈದಾಪುರ, ಶಹಾಪುರ (ಎರಡೂ ಯಾದಗಿರಿ ಜಿಲ್ಲೆ), ಹಾವೇರಿ ಪಿಟಿಒ, ಬೇವೂರು (ಕೊಪ್ಪಳ ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ), ಶೃಂಗೇರಿ, ಕಳಸ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ಮೂಲ್ಕಿ, ಉಪ್ಪಿನಂಗಡಿ, ಸುಳ್ಯ, ಧರ್ಮಸ್ಥಳ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಮುಂಡಗೋಡು (ಉತ್ತರ ಕನ್ನಡ ಜಿಲ್ಲೆ), ಸವಣೂರು, ಹಾವೇರಿ ಎಪಿಎಂಸಿ (ಎರಡೂ ಹಾವೇರಿ ಜಿಲ್ಲೆ), ಬೀದರ್ ಪಿಟಿಒ, ಬೀದರ್, ಮುದಗಲ್ (ರಾಯಚೂರು ಜಿಲ್ಲೆ), ಸಂತಪುರ, ಭಾಲ್ಕಿ (ಎರಡೂ ಬೀದರ್ ಜಿಲ್ಲೆ) , ಬಿ ಬಾಗೇವಾಡಿ, ಇಂಡಿ (ಎರಡೂ ವಿಜಯಪುರ ಜಿಲ್ಲೆ), ಕಲಘಟಗಿ (ಧಾರವಾಡ ಜಿಲ್ಲೆ), ನೆಲೋಗಿ, ಖಜೂರಿ (ಎರಡೂ ಕಲಬುರ್ಗಿ ಜಿಲ್ಲೆ), ಲೋಕಾಪುರ (ಬಾಗಲಕೋಟೆ ಜಿಲ್ಲೆ), ಕಣಬರ್ಗಿ (ಬೆಳಗಾವಿ ಜಿಲ್ಲೆ), ಹುಂಚದಕಟ್ಟೆ, ಆನವಟ್ಟಿ, ತ್ಯಾಗರ್ಥಿ (ಎಲ್ಲವೂ ಶಿವಮೊಗ್ಗ ಜಿಲ್ಲೆ), ಕೊಪ್ಪ, ಕೊಟ್ಟಿಗೆಹಾರ, ಜಯಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಹರಪನಹಳ್ಳಿ (ವಿಜಯನಗರ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ) ತಲಾ 1.

27 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

27 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here