ಸೆಪ್ಟೆಂಬರ್ 06: (ಅಗ್ರಿಕಲ್ಚರ್ ಇಂಡಿಯಾ) ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ; ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ; ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ. ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ: ಇಲ್ಲ.
08ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ , ಕೆಲವೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ , ಕೆಲವೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
































