ಹವಾಮಾನ: ಕರ್ನಾಟಕದ ಕೆಲವೆಡೆ ಭಾರಿ ಮಳೆ ಮುನ್ನೆಚ್ಚರಿಕೆ

0

9ನೇ ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರಿ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಉತ್ತರ ಕನ್ನಡ ಜಿಲ್ಲೆ; ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;

ತಾಪಮಾನ ಎಚ್ಚರಿಕೆ:
ಮುಂದಿನ 48 ಘಂಟೆಗಳು:
ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

9ನೇ ನವೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here