ಹವಾಮಾನ ವರದಿ : ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

0

23ನೇ ಅಕ್ಟೋಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ  ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಗುಡುಗು ಮುನ್ಸೂಚನೆ:  ಮುಂದಿನ 48 ಗಂಟೆಗಳಲ್ಲಿ:   ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ಇಲ್ಲ.

LEAVE A REPLY

Please enter your comment!
Please enter your name here