ಕರ್ನಾಟಕ: ಅಕ್ಟೋಬರ್ 14: ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ , ಕೊಡಗು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45 – 55 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ: ಇಲ್ಲ.
16 ನೇ ಅಕ್ಟೋಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಮಳೆ/ಗುಡುಗಿನಿಂದ ಕೂಡಿದ ಮಳೆ , ಒಮೊಮ್ಮೆ ಭಾರಿಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
16 ನೇ ಅಕ್ಟೋಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಒಳನಾಡಿನಲ್ಲಿ ವ್ಯಾಪಕವಾಗಿ ಮತ್ತು ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಒಳನಾಡಿನಲ್ಲಿ ವ್ಯಾಪಕವಾಗಿ ಮತ್ತು ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಗುಡುಗು ಮುನ್ಸೂಚನೆ: ಮುಂದಿನ 48 ಘಂಟೆಗಳು: ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಬಹಳಷ್ಟು ಸಾಧ್ಯತೆ ಇದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 32.8 ಡಿ.ಸೆ. ಶಿರಾಳಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 19.0 ಡಿ.ಸೆ. ರಾಯಚೂರು ಮತ್ತು ದಾವಣಗೆರೆ ದಾಖಲಾಗಿದೆ.