ಭಾರಿಯಿಂದ ಅತೀ ಭಾರಿ ಮಳೆ ಮುನ್ನೆಚ್ಚರಿಕೆ

0

ಶನಿವಾರ, 10 ನೇ ಡಿಸೆಂಬರ್ 2022 / 19 ನೇ ಅಗ್ರಹಾಯಣ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ): ರಾಯಲ್ಪಾಡು (ಕೋಲಾರ ಜಿಲ್ಲೆ) 3; ಕೋಲಾರ, ಚಿಂತಾಮಣಿ (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 2; ಮಾಲೂರು(ಕೋಲಾರ ಜಿಲ್ಲೆ) 1. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 13.3 ಡಿ.ಸೆ. ದಾವಣಗೆರೆಯಲ್ಲಿ ದಾಖಲಾಗಿದೆ.

12 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ ಗುಡುಗು ಮುನ್ಸೂಚನೆ ಇಲ್ಲ.

ಭಾರೀ ಮಳೆಯ ಎಚ್ಚರಿಕೆ: ಮುಂದಿನ 24 ಗಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ರಾಮನಗರ , ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರ ಮಳೆಯಾಗುವ ಸಾಧ್ಯತೆಯಿದೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ

ಮುಂದಿನ 48 ಗಂಟೆಗಳು: ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

12 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆಇದ್ದು , ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 21 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 23 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here