ಒಳನಾಡು ಮೀನುಗಾರಿಕೆಗೆ ಮಹತ್ವ

0

ಹೊಸ ತಳಿಗಳನ್ನು ಒಳನಾಡು ಮೀನುಗಾರಿಕೆಯಲ್ಲಿ ಪ್ರಯೋಗ ಮಾಡಿ ಯಶಸ್ವಿಯಾಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.

ಅಕ್ಟೋಬರ್ 16 ರಂದು 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಅವರು  ಉದ್ಘಾಟಿಸಿ, ಮಾತನಾಡಿದರು.

ಹೊಸ ತಳಿಗಳನ್ನು ಅಭಿವೃದ್ಧಿ ಮಾಡಿದರೆ ದೊಡ್ಡ ಮಾರುಕಟ್ಟೆ ಲಭ್ಯವಿದೆ.  ಮಾರುಕಟ್ಟೆ ಹಾಗೂ ಉತ್ಪಾದನೆಯ ನಡುವೆ ದೊಡ್ಡ ಅಂತರವಿದೆ.  ಈ ಅಂತರ ತುಂಬಲು ಒಳನಾಡು ಮೀನುಗಾರಿಕೆಗೆ ಮಹತ್ವ ನೀಡಿ ಹೊಸ ತಳಿಗಳನ್ನು ಪ್ರಯೋಗ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳಸಬೇಕು. ಸಮುದ್ರದ ಮೀನುಗಾರಿಕೆಗೆ ಹಲವಾರು ಕಾರ್ಯಕ್ರಮಗಳನ್ನು ನಾವು ರೂಪಿಸಿದ್ದೇವೆ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರತಿ ಹೆಕ್ಟೇರ್ ಹೊಸದಾಗಿ ಪ್ರಾರಂಭಿಸಿದರೆ 1 ಲಕ್ಷ ರೂ.ಗಳವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಎಂದರು.

ಕರಾವಳಿಯಲ್ಲಿ ಉತ್ಪಾದನೆ ಯಾಗುವ ಮೀನಿಗೆ ತನ್ನದೇ ಮಾರುಕಟ್ಟೆ ವ್ಯವಸ್ಥೆ ಇದೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದ ಸಮುದ್ರ ಮಟ್ಟದಲ್ಲಿ ಏರಿಕೆಯಾಗಿ ಮೀನು ಉತ್ಪಾದನೆಯಲ್ಲಿ ಬಹಳಷ್ಟು ಏರುಪೇರುಗಳಾಗಿವೆ. ಕರಾವಳಿ ಮೀನುಗಾರರು 8 ಅಥವಾ 10 ನಾಟಿಕಲ್ ಮೈಲುಗಳಲ್ಲಿ ಮೀನುಗಾರಿಕೆ ಮಾಡುತ್ತಾರೆ. ಆದರೆ ಬಹಳ ದೊಡ್ಡ ಉತ್ಕೃಷ್ಟ ಮೀನುಗಳು ಆಳ ಸಮುದ್ರದಲ್ಲಿ ದೊರೆಯುತ್ತವೆ. ನಮ್ಮ ಮೀನುಗಾರರು ದೊಡ್ಡ ಟ್ರಾಲರ್ ಬಳಸಿ ಆಳ ಸಮುದ್ರ ಮೀನುಗಾರಿಕೆ ಮಾಡಬೇಕೆಂದು ಈ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರೋತ್ಸಾಹದಿಂದ  ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯಡಿ ನಾವು 100 ಹೊಸ ಆಳ ಸಮುದ್ರ ಬೋಟುಗಳನ್ನು  ಒದಗಿಸುತ್ತಿದ್ದು, 40 % ಸಹಾಯಧನವಿದ್ದು ಅತಿ ಸುಲಭ ದರದಲ್ಲಿ ಸಾಲದ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರಸ್ತುತ 100 ಬೋಟುಗಳನ್ನು ನೀಡಿದರೆ, ಮುಂದಿನ ವರ್ಷ 300 ಬೋಟುಗಳಿಗೆ ವಿಸ್ತರಣೆ ಮಾಡುವ ಉದ್ದೇಶವಿದೆ. ಮೀನುಗಾರರ ಸಂಘಗಳು ಕೂಡ ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿ ಹೆಚ್ಚಿನ ಉತ್ಪಾದನೆ ಮಾಡಬೇಕೆಂಬ ಉದ್ದೇಶ ನಮ್ಮದು ಎಂದರು.

LEAVE A REPLY

Please enter your comment!
Please enter your name here