ರೈತರಿಗೆ ಶೂನ್ಯಬಡ್ಡಿ ಸಾಲದ ಮಿತಿ ಏರಿಕೆ

1

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2023 – 24ನೇ ಹಣಕಾಸು ವರ್ಷದ ಪೂರಕ ಬಜೆಟ್  ಮಂಡನೆಯಾಗಿದೆ. ಸಹಕಾರ ಕ್ಷೇತ್ರ ಸುಸ್ಥಿರತೆಗೆ ಹಣಕಾಸು  ಒದಗಿಸಲಾಗಿದೆ.  ಈ ಕುರಿತಂತೆ ಬಜೆಟ್ ಭಾಷಣದಲ್ಲಿ ಅವರು ಹೇಳಿರುವ ಅಂಶಗಳು ನಿಮ್ಮ ಮುಂದೆ ಇದೆ.

ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ.

ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂ. ವರೆಗಿನ ಸಾಲಕ್ಕೆ ರಾಜ್ಯ ಸರ್ಕಾರವು ಶೇ. 1 ರಷ್ಟು ಬಡ್ಡಿ ಸಹಾಯಧನ ನೀಡಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ (Pick-up Van) ಖರೀದಿಸಲು ಏಳು ಲಕ್ಷ ರೂ. ವರೆಗಿನ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ವಿತರಿಸಲಾಗುವುದು.

1 COMMENT

  1. ಆದರೆ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಸಾಲವಿದ್ದ್ರೆ ಕೊಡುವುದಿಲ್ಲ ಸರ್

LEAVE A REPLY

Please enter your comment!
Please enter your name here