ಲೇಖಕರು: ಸಂಧ್ಯಾ ಉರಣಕರ್

ಮುಂಗಾರು ಬೆಳೆ ಸಮೀಕ್ಷೆ ಶೇ.100 ರಷ್ಟು ಯಶಸ್ವಿಯಾಗಿದೆ. ಇದೇ ಮಾದರಿ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ಕೃಷಿ ಇಲಾಖೆ ತೀರ್ಮಾನಿಸಿದೆ.ಈ ದಿಶೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಲಾಖಾಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ರೈತರೇ ಹಿಂಗಾರು ಬೆಳೆ ಸಮೀಕ್ಷೆಯನ್ನು ಕೂಡ ಯಶಸ್ವಿಯಾಗಿ ನಡೆಸುವ ಬಗ್ಗೆ  ಚರ್ಚಿಸಿದರು.

ಮಾಸ್ಟರ್ಸ್ ಗಳಿಗೆ ಹಿಂಗಾರು ಬೆಳೆ ಸಮೀಕ್ಷೆ ಬಗ್ಗೆ ತರಬೇತಿ ನೀಡುವುದು, ಮಾಸ್ಟರ್ಸ್ ತರಬೇತುದಾರರಿಂದ ಖಾಸಗಿ ನಿವಾಸಿಗಳಿಗೆ (ಪಿಆರ್ ಓ) ರೈತರ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ತರಬೇತಿ ನೀಡಲಾಗುವುದು. ಬಳಿಕ ಆ್ಯಪ್ ಮೂಲಕ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ತಾವೇ ನಡೆಸಲು ಅಗತ್ಯವಾದ ಪ್ರಕ್ರಿಯೆ ನಡೆಸುವಿಕೆ ಸೇರಿದಂತೆ ಮತ್ತಿತ್ತರ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮುಂಗಾರು ಬೆಳೆ ಸಮೀಕ್ಷೆಗೆ ಕೃಷಿ ಇಲಾಖೆ ಜೊತೆ ಸಹಕರಿಸಿದ ಕಂದಾಯ, ರೇಷ್ಮೆ, ತೋಟಗಾರಿಕೆ ಇಲಾಖೆಗೂ ಧನ್ಯವಾದಗಳನ್ನು  ತಿಳಿಸಿದರು.

ಡಿಸೆಂಬರ್ ಮೊದಲ ವಾರದಲ್ಲಿ ಹಿಂಗಾರು ಬೆಳೆ ಸಮೀಕ್ಷೆ ರೈತರ ಆ್ಯಪ್ ಬಿಡುಗಡೆಯಾಗಲಿದೆ. ಶೀಘ್ರದಲ್ಲಿಯೇ ನಿಗದಿತ ದಿನಾಂಕ ಪ್ರಕಟಿಸುವುದಾಗಿ  ತಿಳಿಸಿದರು. ಮುಂಗಾರು ಬೆಳೆ ಸಮೀಕ್ಷೆ ಯಶಸ್ವಿಯಾದಂತೆ ಹಿಂಗಾರು ಬೆಳೆ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಬಿ.ಸಿ.ಪಾಟೀ್ಲ್ ಮನವಿ ಮಾಡಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ನಿರ್ದೇಶಕ ಶ್ರೀನಿವಾಸ್, ಹೆಚ್ಚುವರಿ ನಿರ್ದೇಶಕ ಆ್ಯಂತೋನಿ ಎಂ. ಇಮ್ಯಾನುಲ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.

1 COMMENT

  1. ಮೈ ಡಿಯರ್ ಸರ್ ನಿಮಗೆ ಶುಭಾಶಯಗಳು ನಿಮ್ಮ ವಿಚಾರಗಳು 100%ಸರಿ ಇದೇ ನೀವು ಚೆನ್ನಾಗಿ ಕಾರ್ಯಕ್ರಮ Madikondidhiri ಒಳ್ಳೇದು

LEAVE A REPLY

Please enter your comment!
Please enter your name here