- 19 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ;ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ; ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ಕರಾವಳಿ ಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ..ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ 1- 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಕೊಡಗು & ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು ರಾಜ್ಯದ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಮುಂದಿನ 48 ಘಂಟೆಗಳು: ಇಲ್ಲ
ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
19ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಮುಂದಿನ 48 ಗಂಟೆಗಳು:
ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ