ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕವೇ ಮುಂಚೂಣಿ

0

ಬೆಂಗಳೂರು, ಅಕ್ಟೋಬರ್ 06:  ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿರುವ ರಾಜ್ಯ. ಈವರೆಗೆ  ಸರ್ವೆ ನಂಬರ್ ಹಾಗೂ ಆಧಾರ್ ಗಳನ್ನು ಜೋಡಿಸಲಾಗಿದ್ದು, 78 ಲಕ್ಷ ರೈತರನ್ನು  ಈ ವ್ಯಾಪಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು   ನೈಸರ್ಗಿಕ ‌ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವಿಡಿಯೊ ಸಂವಾದದಲ್ಲಿ  ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿದರು.

ಕೇಂದ್ರ ಕೃಷಿ ಪ್ರಧಾನ ಕಾರ್ಯದರ್ಶಿ ಗಳು ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂದಿರುವ  ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು,  ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ಫ್ರೂಟ್ಸ್ ಯೋಜನೆಯನ್ನು ಎಲ್ಲಾ ರಾಜ್ಯ ಗಳೂ ಅಳವಡಿಸಿಕೊಳ್ಳುತ್ತಿವೆ ಎಂದರು.

 ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಇದರ ಉಪಯೋಗ ಪಡೆದು ರೈತರನ್ನು ಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಂಡಿದೆ ಎಂದರು.

LEAVE A REPLY

Please enter your comment!
Please enter your name here