ಗುರುವಾರ, 03 ನೇ ಆಗಸ್ಟ್ 2023 / 12ನೇ ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 5; ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) 3; ಕೊಲ್ಲೂರು (ಉಡುಪಿ ಜಿಲ್ಲೆ), ಅಂಕೋಲ, ಕದ್ರಾ, ಸಿದ್ದಾಪುರ, ಬೇಲಿಕೇರಿ ( ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಅಗ್ರಹಾರ ಕೋನಂದೂರು (ಶಿವಮೊಗ್ಗ ಜಿಲ್ಲೆ) ತಲಾ 2; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಗೇರುಸೊಪ್ಪ, ಕುಮಟಾ, ಬನವಾಸಿ, ಮಂಚಿಕೇರಿ, ಜೋಯಿಡಾ, ಜಗಲ್ಬೇಟ್ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಶೃಂಗೇರಿ, ಕೊಪ್ಪ, ಕಮ್ಮರಡಿ (ಎಲ್ಲವೂ ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಬೆಳಗಾವಿ ನಗರ, ಮಂಡಗದ್ದೆ (ಶಿವಮೊಗ್ಗ ಜಿಲ್ಲೆ) ತಲಾ 1.
05 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಬಿರುಗಾಳಿ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
05 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.