ಕರ್ನಾಟಕ ರಾಜ್ಯದ ಹವಾಮಾನ ಮುನ್ಸೂಚನೆ

0

ಬುಧವಾರ, 30 ನೇ  ಆಗಸ್ಟ್ 2023 / 08ನೇ  ಭಾದ್ರಪದ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.  ಕರಾವಳಿ  ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು . ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ.ನಲ್ಲಿ):

ಸರಗೂರು (ಮೈಸೂರು ಜಿಲ್ಲೆ) 4; ಸಿಂಧನೂರು (ರಾಯಚೂರು ಜಿಲ್ಲೆ) 3; ಕೆರೂರು (ಬಾಗಲಕೋಟೆ ಜಿಲ್ಲೆ), ಲಿಂಗಸುಗೂರು, ಮುದಗಲ್ (ಎರಡೂ ರಾಯಚೂರು ಜಿಲ್ಲೆ) ತಲಾ 2; ಮಂಕಿ (ಉತ್ತರ ಕನ್ನಡ ಜಿಲ್ಲೆ), ಸೇಡಬಾಳ (ಬೆಳಗಾವಿ ಜಿಲ್ಲೆ), ನರಗುಂದ (ಗದಗ ಜಿಲ್ಲೆ), ಬೇವೂರು (ಕೊಪ್ಪಳ ಜಿಲ್ಲೆ), ಬಾದಾಮಿ (ಬಾಗಲಕೋಟೆ ಜಿಲ್ಲೆ), ಬಿ.ಬಾಗೇವಾಡಿ, ನಲ್ವತವಾಡ, ತಾಳಿಕೋಟೆ (ಎಲ್ಲ ವಿಜಯಪುರ ಜಿಲ್ಲೆ) ತಲಾ 1.

01 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಕೆಲವು  ಸ್ಥಳಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಕೆಲವು  ಸ್ಥಳಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

01 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.  ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 32  ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.  ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 31  ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here