2022 /29 ನೇ ಶ್ರಾವಣ 1943 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ; ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ):
ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 6; ಸೈದಾಪುರ (ಯಾದಗಿರಿ ಜಿಲ್ಲೆ) 4; ಜಗಲಭೆಟ್, ಕದ್ರಾ (ಎರಡೂ ಉತ್ತರ ಕನ್ನಡ ಜಿಲ್ಲೆ) ತಲಾ 3; ಸಿದ್ದಾಪುರ (ಉಡುಪಿ ಜಿಲ್ಲೆ) 2; ಶಿರಾಲಿ, ಕಾರ್ಕಳ (ಉಡುಪಿ ಜಿಲ್ಲೆ), ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ), ಬೇವೂರು, ಯಲಬುರ್ಗಾ (ಎರಡೂ ಕೊಪ್ಪಳ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ), ಹರಪನಹಳ್ಳಿ (ದಾವಣಗೆರೆ ಜಿಲ್ಲೆ), ಶೃಂಗೇರಿ, ಜಯಪುರ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 1.
22ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಗುಡುಗು ಮುನ್ಸೂಚನೆ – ಮುಂದಿನ 48 ಘಂಟೆಗಳು:
ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, , ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS ಕರ್ನಾಟಕ ಇಲ್ಲ.
22 ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.