ಪಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ e-KYC ಮಾಡಿಸಲು 31.07.2022 ಕೊನೆಯ ದಿನಾಂಕವಾಗಿರುತ್ತದೆ.

ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ದಿನಾಂಕ. 01.02.2019 ರಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ ವಾರ್ಷಿಕ ರೂ. 6000/-ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ಮೂಲಕ ವರ್ಗಾವಣೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ನೆರವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಬೇಕಾದರೆ e-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಕರ್ನಾಟಕ ರಾಜ್ಯದಲ್ಲಿ ಇಲ್ಲಿಯವರೆಗೆ ಶೇ. 16 ರಷ್ಟು ರೈತರು ಮಾತ್ರ e-KYC_ಮಾಡಿಸಿದ್ದು ಶೇ. 84 ರಷ್ಟು ರೈತರು ಬಾಕಿ ಇರುತ್ತಾರೆ. ದಿನಾಂಕ 31.07.2022 e-KYC ಮಾಡಿಸಲು ಕೊನೆಯ ದಿನಾಂಕವಾಗಿರುವುದರಿಂದ ರೈತರು ಓಟಿಪಿ ಆಧಾರಿತ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್‌ ಆಧಾರಿತ e-KYC ಮಾಡಿಸಲು ರಾಜ್ಯ ಕೃಷಿ ಆಯುಕ್ತರು ತಿಳಿಸಿದ್ದಾರೆ.

4 COMMENTS

    • ನಮಸ್ತೆ, ನಿಮ್ಮ ಆಧಾರ್‌ ಸೇರಿದಂತೆ ಬ್ಯಾಂಕ್‌ ಖಾತೆ ವಿವರಗಳನ್ನು ಸಂಬಂಧಿಸಿದ ಸರ್ಕಾರಿ ಕಚೇರಿಗಳಿಗೆ ಮಾತ್ರ ಕೊಡಿ. ನೀವು ಸೂಕ್ತ ದಾಖಲಾತಿ ಸಲ್ಲಿಸಿದ್ದರೆ ಅವರು ನಿಮ್ಮ ಖಾತೆಗೆ ಹಣ ಜಮಾವಣೆಯಾಗುವ ವ್ಯವಸ್ಥೆ ಮಾಡುತ್ತಾರೆ. ಬೇರೆ ಯಾರಿಗೂ ನಿಮ್ಮ ವಿವರಗಳನ್ನು ನೀಡಿದರೆ ಪ್ರಯೋಜನವಾಗುವುದಿಲ್ಲ

LEAVE A REPLY

Please enter your comment!
Please enter your name here