ಶೀಘ್ರ ಬೆಳೆನಷ್ಟ ಸಮೀಕ್ಷೆ;  ಕೃಷಿ ಸಚಿವ ಬಿ.ಸಿ.ಪಾಟೀಲ್

ಜಿಲ್ಲೆಯ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ಹಣವಾಳ,ಸಿಂಗನಾಳ, ಸಿಂಗನಾಳ ಕ್ಯಾಂಪ್, ಜಿರಾಳ ಕಲ್ಲಗುಡಿ ಗ್ರಾಮಗಳ ಹೊಲಗಳ ವೀಕ್ಷಣೆ ಮಾಡಿದ ಅವರು ಅಕಾಲಿಕ ಮಳೆಯಿಂದ ಬೆಳೆನಷ್ಟವಾಗಿರುವುಕ್ಕೆ ವಿಷಾದ ವ್ಯಕ್ತಪಡಿಸಿದರು. ಅಕಾಳಿಕ ಮಳೆಯಿಂದಾಗಿ ಇಂಥ ಸ್ಥಿತಿ ಉಂಟಾಗಿದ್ದು ಕಂಗೆಡದಂತೆ  ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.

0

ಕೊಪ್ಪಳ, ಏ. 9:ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಿವಿಧ ಬೆಳೆಗಳು ನಷ್ಟವಾಗಿದ್ದವು. ಇದನ್ನು ಗಮನಿಸಿದ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷಿಕರಿಂದ ನೇರ ಮಾಹಿತಿ ಪಡೆದರು.

ಜಿಲ್ಲೆಯ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ಹಣವಾಳ,ಸಿಂಗನಾಳ, ಸಿಂಗನಾಳ ಕ್ಯಾಂಪ್, ಜಿರಾಳ ಕಲ್ಲಗುಡಿ ಗ್ರಾಮಗಳ ಹೊಲಗಳ ವೀಕ್ಷಣೆ ಮಾಡಿದ ಅವರು ಅಕಾಲಿಕ ಮಳೆಯಿಂದ ಬೆಳೆನಷ್ಟವಾಗಿರುವುಕ್ಕೆ ವಿಷಾದ ವ್ಯಕ್ತಪಡಿಸಿದರು. ಅಕಾಳಿಕ ಮಳೆಯಿಂದಾಗಿ ಇಂಥ ಸ್ಥಿತಿ ಉಂಟಾಗಿದ್ದು ಕಂಗೆಡದಂತೆ  ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.

ಅತೀ ಶೀಘ್ರದಲ್ಲಿ ಬೇಗ ಬೆಳೆ ನಷ್ಟ ಸಮೀಕ್ಷೆ ಮಾಡಲಾಗುವುದು.ಬೆಳೆ ನಷ್ಟದಿಂದ  ರೈತರು ಆತಂಕಕ್ಕೊಳಗಾಗುವುದು ಬೇಡ‌.ಪ್ರಕೃತಿ ವಿಕೋಪಗಳಾದಾಗ ಧೈರ್ಯದಿಂದ ಇರಬೇಕು. ಸರ್ಕಾರ ರೈತರ ಜೊತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಾಂದರ್ಭಿಕ ಚಿತ್ರ

ಈ ಸಂದರ್ಭದಲ್ಲಿ ಸಂಸದ ಕರಡಿ‌ ಸಂಗಣ್ಣ, ಶಾಸಕರಾದ ದಡೆಸೂಗೂರು ಬಸವರಾಜ್, ಪರಣ್ಣ ಮುನವಳ್ಳಿ,ಜಿ‌ಪಂ ಅಧ್ಯಕ್ಷ ವಿಶ್ವನಾಥ ರೆಡ್ಡಿ  ಸೇರಿದಂತೆ ಕೃಷಿ ತೋಟಗಾರಿಕಾ ಅಧಿಕಾರಿಗಳು ಜೊತೆಗಿದ್ದರು. ಇದಕ್ಕೂ ಮುನ್ನ  ದಾರಿ ಮಧ್ಯದಲ್ಲಿ  ಬೇರೆಬೇರೆ ಗ್ರಾಮಗಳ ರೈತರನ್ನು ಭೇಟಿಯಾದರು. ಕೊಪ್ಪಳ ಜಿಲ್ಲೆಯ ಮೆಟ್ರಿ ಗ್ರಾಮದಲ್ಲಿ  ರೈತರನ್ನುದ್ದೇಶಿಸಿ ಮಾತನಾಡಿ, ಯಾವುದೇ ಆತಂಕವಿಲ್ಲದೇ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ.ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

LEAVE A REPLY

Please enter your comment!
Please enter your name here