ನೈಸರ್ಗಿಕ ಕೃಷಿಗೆ ಭೂ ಪರಿವರ್ತನೆ

0

ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು  ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿ ಯನ್ನು ಸಕ್ರಿಯವಾಗಿ ಕೈಗೊಂಡಿದೆ.

ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವ ವಿದ್ಯಾಲಯಗಳಿದ್ದು, ವಿಶ್ವವಿದ್ಯಾಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿ ಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ  ಎಂದು ವಿವರಿಸಿದರು.

ನೈಸರ್ಗಿಕ ಕೃಷಿಗೆ ಭೂ ಪರಿವರ್ತನೆ

ರಾಜ್ಯದಲ್ಲಿ  2.4 ಲಕ್ಷ ಎಕರೆ ಭೂ ಪ್ರದೇಶದಲ್ಲಿ ಕೈಗೊಂಡಿರುವ  ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ.  ಮುಂದಿನ ಮಾರ್ಚ್ ಒಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತನೆ ಮಾಡಲು ಗುರಿ ನಿಗದಿ ಪಡಿಸಲಾಗಿದೆ  ಎಂದರು.

ನೈಸರ್ಗಿಕ ಕೃಷಿಗೆ 41, 434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಭೇಟಿಗಳನ್ನು ಕೈಗೊಂಡಿದೆ ಹಾಗೂ   ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಯೋಜನೆಯನ್ನು  ಮಿಷನ್ ಮಾದರಿಯಲ್ಲಿ ಕಾರ್ಯಗತ ಮಾಡಲಾಗುತ್ತಿದೆ ಎಂದರು.

ಮಣ್ಣಿನ ಫಲವತ್ತತೆ

ನೈಸರ್ಗಿಕ ಕೃಷಿಯಲ್ಲಿ ವೈಜ್ಞಾನಿಕ ಅಂಶಗಳನ್ನು ಕೂಡ ಗಮನದಲ್ಲಿಟ್ಟುಕೊಂಡು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲು ಒತ್ತು ನೀಡಲಾಗಿದೆ. ಮಣ್ಣಿನಲ್ಲಿ ಸಾರಾಜನಕ ಹಾಗೂ ಕಾರ್ಬನ್  ಪ್ರಮಾಣ ಸೇರಿದಂತೆ ನೈಸರ್ಗಿಕ ಗೊಬ್ಬರ ಬಳಕೆಗೂ ಮಹತ್ವ ನೀಡಲಾಗಿದೆ. ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ  ಅಧ್ಯಯನ ಕೈಗೊಳ್ಳಲಾಗಿದೆ ಎಂದರಲ್ಲದೆ

ಈ ಕುರಿತಂತೆ ಅಧ್ಯಯನಗಳು ಉತ್ತಮ ಇಳುವರಿ ಹಾಗೂ ಉತ್ಪಾದನೆಗೆ ಎಡೆ ಮಾಡಿಕೊಡುತ್ತದೆ ಎಂದು ತಿಳಿಸಿದರು.  ರೈತರು ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here