ಮಂಗಳವಾರ, 25 ನೇ ಏಪ್ರಿಲ್ 2023 / 05 ನೇ ವೈಶಾಖ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಕುಣಿಗಲ್ (ತುಮಕೂರು ಜಿಲ್ಲೆ) 6; ಸರಗೂರು (ಮೈಸೂರು ಜಿಲ್ಲೆ) 4; ಕೊಣನೂರು (ಹಾಸನ ಜಿಲ್ಲೆ) 2; ಮದ್ದೂರು (ಮಂಡ್ಯ ಜಿಲ್ಲೆ), ಚಿಕ್ಕನಹಳ್ಳಿ ಎಡಬ್ಲ್ಯುಎಸ್, ಸಿರಾ (ಎರಡೂ ತುಮಕೂರು ಜಿಲ್ಲೆ) ತಲಾ 1.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.5 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
27 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬೀದರ್, ಬೆಳಗಾವಿ, ರಾಯಚೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ; ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಹಾವೇರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ :
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
27 ನೇ ಏಪ್ರಿಲ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.