ಮಂಗಳವಾರ, 18 ನೇ ಏಪ್ರಿಲ್ 2023 / 28 ನೇ ಚೈತ್ರ 1945 ಶಕಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಮಳೆಯ ಪ್ರಮಾಣ (ಸೆಂ.ಮೀನಲ್ಲಿ) ಇಲ್ಲ
20 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ: ಇಲ್ಲ
ಗರಿಷ್ಠ ಉಷ್ಣಾಂಶದ ಎಚ್ಚರಿಕೆ :
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.